ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಅಕ್ಷಯ್ ಕುಮಾರ್ ನೇಮಕ

Public TV
1 Min Read

ಡೆಹ್ರಾಡೂನ್: ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಲು ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಅವರನ್ನು ಸಿಎಂ ಪುಷ್ಕರ್ ಸಿಂಗ್ ಧಾಮಿ ನೇಮಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಅಕ್ಷಯ್ ಕುಮಾರ್ ಅವರನ್ನು ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲು ಸಿಎಂ ನೇಮಕ ಮಾಡಿಕೊಂಡಿದ್ದಾರೆ. ಈ ಹಿಂದೆ ಪುಷ್ಕರ್ ಸಿಂಗ್ ಧಾಮಿ ಅವರು ಅಕ್ಷಯ್ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಪ್ರಸ್ತಾವನೆಯನ್ನು ಮಂಡಿಸಿದ್ರು. ಇದಕ್ಕೆ ಅಕ್ಷಯ್ ಕುಮಾರ್ ಸಹ ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಸುನಿಲ್ ಗ್ರೋವರ್ ಆರೋಗ್ಯ ವಿಚಾರಿಸಲು ತನ್ನ ವೈದ್ಯ ತಂಡಕ್ಕೆ ಸೂಚಿಸಿದ ಸಲ್ಮಾನ್

ಈ ಪರಿಣಾಮ ಅಕ್ಷಯ್ ಕುಮಾರ್ ಇಂದು ಬೆಳಗ್ಗೆ ಡೆಹ್ರಾಡೂನ್‍ನಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಅಕ್ಷಯ್ ಕುಮಾರ್ ಎಂದು ಅಧಿಕೃತವಾಗಿ ಫೋಷಿಸಿದ್ದಾರೆ.

70 ಸ್ಥಾನಗಳ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಕೆಲವು ದಿನಗಳ ಹಿಂದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ಭಾರತದ ಪ್ರತಿಭಾವಂತ ಕ್ರೀಡಾಪಟು, ಯುವ ಐಕಾನ್ ಮತ್ತು ದಂಗಲ್ ಹುಡುಗಿ ಬಬಿತಾ ಫೋಗಟ್ ಬಿಜೆಪಿ ಸರ್ಕಾರವನ್ನು ಪ್ರಶಂಸೆ ಮಾಡಿ ಟ್ವೀಟ್ ಮಾಡಿದ್ದರು.

ನಡ್ಡಾ ಮನೆ-ಮನೆಗೆ ಭೇಟಿ!
ನಿನ್ನೆ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ ಹಾಕಿ ಎಂದು ಮತದಾರರ ಮನವೊಲಿಸಲು ಮನೆ-ಮನೆಗೆ ಹೋಗಿ ಪ್ರಚಾರದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: 40 ವರ್ಷಗಳ ಹಿಂದೆ ಅವರನ್ನು ಭೇಟಿಯಾಗಿದ್ದೆ- ಸಿಧು ಜೊತೆಗಿನ ಮೊದಲ ಭೇಟಿ ನೆನೆದ ರಾಗಾ

ಉತ್ತರಾಖಂಡದ ಗಂಗೋತ್ರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮಾಡಿದ ಕೆಲಸದ ವರದಿ ನಿಮ್ಮ ಮುಂದೆಯೇ ಇದೆ. ನಮ್ಮ ಸರ್ಕಾರ ಬಡವರು, ತುಳಿತಕ್ಕೊಳಗಾದವರು, ಹಿಂದುಳಿದವರು, ದೀನದಲಿತರು ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ. ಬಿಜೆಪಿಗೆ ನಿಮ್ಮ ಸಂಪೂರ್ಣ ಆಶೀರ್ವಾದವನ್ನು ನೀಡಲು ನೀವೆಲ್ಲರೂ ಮನಸ್ಸು ಮಾಡಿದ್ದೀರಿ ಎಂದು ಇಲ್ಲಿನ ಜನರ ಉತ್ಸಾಹ ನೋಡಿ ತಿಳಿಯುತ್ತೆ ಎಂದು ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *