ಮದರಸಾಗಳಲ್ಲೂ ಡ್ರೆಸ್ ಕೋಡ್ ಜಾರಿ

Public TV
1 Min Read

ಡೆಹ್ರಾಡೂನ್: ಉತ್ತರಾಖಂಡದ ಎಲ್ಲಾ ಮದರಸಾಗಳಲ್ಲಿ (Madrassas) ಇನ್ಮುಂದೆ ಡ್ರೆಸ್ ಕೋಡ್‌ಗಳು (Dress code) ಜಾರಿಗೆ ಬರಲಿದೆ ಎಂದು ಉತ್ತರಾಖಂಡ (Uttarakhand) ವಕ್ಫ್ ಬೋರ್ಡ್ (Waqf Board) ತಿಳಿಸಿದೆ.

ಈ ಬಗ್ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾದಾಬ್ ಶಾಮ್ಸ್ ಮಾತನಾಡಿ, ಉತ್ತರಾಖಂಡ ವಕ್ಫ್ ಬೋರ್ಡ್‌ನಲ್ಲಿ ನೋಂದಣಿಯಾಗಿರುವ 103 ಮದರಸಾಗಳಲ್ಲಿ ಸಮವಸ್ತ್ರ ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತರಲಾಗುತ್ತದೆ. ಅಷ್ಟೇ ಅಲ್ಲದೇ ಮದರಸಾವು ಬೆಳಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ತರಗತಿಗಳು ನಡೆಯಲಿದ್ದು, ಅಲ್ಲಿಯೂ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಸಹ ಪರಿಚಯಿಸಲಾಗುವುದು ಎಂದು ಹೇಳಿದರು.

ರಾಜ್ಯದ ಎಲ್ಲಾ ಮದರಸಾಗಳನ್ನು ಸಮೀಕ್ಷೆ ಮಾಡಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಸಮಿತಿಯನ್ನು ರಚಿಸುವ ನಿರೀಕ್ಷೆಯಿದೆ. ಆಧುನಿಕ ಶಾಲೆಗಳ ಮಾದರಿಯಲ್ಲಿ ಮದರಸಾಗಳನ್ನು ನಡೆಸಲು ಸಹ ಸಿದ್ಧತೆ ನಡೆದಿದ್ದು, ಮೊದಲ ಹಂತದಲ್ಲಿ 7 ಮದರಸಾಗಳನ್ನು ಆಧುನಿಕರಣಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಡೆಹ್ರಾಡೂನ್‌ನಲ್ಲಿ ಎರಡು, ಉಧಮ್ ಸಿಂಗ್ ನಗರದಲ್ಲಿ ಎರಡು, ಹರಿದ್ವಾರದಲ್ಲಿ ಎರಡು ಮತ್ತು ನೈನಿತಾಲ್‌ನಲ್ಲಿ ಒಂದು ಮದರಸಾವನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇತ್ತೀಚೆಗೆ ಮದರಸಾಗಳಿಗೆ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸುತ್ತಿಲ್ಲ ಎಂಬ ಆರೋಪದ ನಡುವೆ ಮದರಸಾಗಳ ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಹೇಳಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *