ಉತ್ತರಪ್ರದೇಶ ಕೇರಳವಾದರೆ ಧರ್ಮದ ಹೆಸರಲ್ಲಿ ಹತ್ಯೆ ನಡೆಯಲ್ಲ: ಯೋಗಿ ಆದಿತ್ಯನಾಥ್‍ಗೆ ಪಿಣರಾಯಿ ತಿರುಗೇಟು

Public TV
2 Min Read

ನವದೆಹಲಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು ಎಂದು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಇತರೆ ಪಕ್ಷದ ಮುಖಂಡರು ಟೀಕಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಯಪಡುವಂತೆ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವಾಗಿ ಬದಲಾಗುತ್ತದೆ. ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಉತ್ತಮ ಜೀವನಮಟ್ಟ ದೊರೆಯುತ್ತಿದೆ ಎಂದು ತೀರುಗೇಟು ನೀಡಿದರು.

ಈ ಕುರಿತು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಆದಿತ್ಯನಾಥ್ ಹೇಳುತ್ತಾರೆ. ಇದನ್ನೂ ಓದಿ: ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರ, ಕೇರಳವಾಗಬಹುದು: ಯೋಗಿ ಆದಿತ್ಯನಾಥ್

ಇದಕ್ಕೆ ಉತ್ತರಪ್ರದೇಶದ ಜನರು ಅದೃಷ್ಟವಂತರಾಗಿರಬೇಕು. ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಈ ಸ್ಥಳಕ್ಕೆ ದೊರೆತರೆ ಅನೇಕ ಅದ್ಭುತಗಳನ್ನು ಮಾಡುತ್ತದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

Share This Article
Leave a Comment

Leave a Reply

Your email address will not be published. Required fields are marked *