ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

By
2 Min Read

ನವದೆಹಲಿ: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ (v.Somanna)  ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.

ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್‌ಗೆ (Congress) ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ (BJP) ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೋಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ:  ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ. ಒಂದು ವೇಳೆ ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ತುಮಕೂರು ಕ್ಷೇತ್ರಕ್ಕೆ ನಾನು ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ ಅಭಿಲಾಷೆ. ಸ್ಥಳೀಯ ನಾಯಕರೂ ಸಹ ಬೆಂಬಲ ನೀಡುತ್ತಿದ್ದಾರೆ. ಅಂತಿಮವಾಗಿ ಎಲ್ಲವೂ ಹೈಕಮಾಂಡ್ ನಿರ್ಧರ ಮಾಡಲಿದೆ. ಕೊಟ್ಟರೆ ಜವಾಬ್ದಾರಿ ನಿಭಾಯಿಸುತ್ತೇನೆ. ಇಲ್ಲ ಅಂದರೆ ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡಲ್ಲ – ಶಶಿ ತರೂರ್‌

ಮಾಜಿ ಸಿಎಂ ಹೆಚ್‌ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪಕ್ಷ ಬೇರೆ ಇರಬಹುದು. ಆದರೆ ನಾವು ಮೊದಲಿನಿಂದ ಪರಿಚಯ. ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ. ಅವರು 2 ಬಾರಿ ಮುಖ್ಯಮಂತ್ರಿಯಾದವರು. ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ ಅಷ್ಟೇ. ನಾವು ಹಿಂದು ಹಿಂಗೇ ಮಾತಾಡೋಕೆ ದೇವೇಗೌಡರು ಕಾರಣ. ಅವರ ಒಡನಾಟ ಮತ್ತು ಅವರು ಕೊಟ್ಟಿರುವ ಅನುಭವ ಮಹತ್ವ ಎಂದು ಮಾಜಿ ಪ್ರಧಾನಿ ದೇವೇಗೌಡರನ್ನು ಸೋಮಣ್ಣ ಹೋಗಳಿದ್ದಾರೆ. ಇದನ್ನೂ ಓದಿ: ಹಸಿವು ಎಂದು ಬೆಕ್ಕಿನ ಹಸಿಮಾಂಸ ತಿಂದ ಭೂಪ!

ಸುಧಾರಕರ್‌ಗೆ ಚಿಕ್ಕಬಳ್ಳಾಪುರದಿಂದ ಭರವಸೆ ನೀಡಿದ್ದಾರಾ ಇಲ್ವಾ ಗೊತ್ತಿಲ್ಲ. ಅದರ ಮಾಹಿತಿ ಇಲ್ಲ ಮತ್ತು ಆ ಬಗ್ಗೆ ಮಾತನಾಡುವುದಿಲ್ಲ. ಸುಮಲತಾ ಸ್ಪರ್ಧಿಸುವುದರ ಬಗ್ಗೆ ಹೈಕಮಾಂಡ್ ನಿರ್ಧರ ಮಾಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

Share This Article