ಉಡುಪಿ: ಉಕ್ಕಿನ ರೈಲ್ವೇ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ

Public TV
1 Min Read

– ಇಂದ್ರಾಳಿ ಬ್ರಿಡ್ಜ್ ಉದ್ಘಾಟಿಸಲಿರುವ ವಿ.ಸೋಮಣ್ಣ

ಉಡುಪಿ: ನಗರದ ಎರಡು ದಶಕದ ಕನಸು ನನಸಾಗುತ್ತಿದೆ. ಇಂದ್ರಾಳಿ ರೈಲ್ವೆ ಬ್ರಿಡ್ಜ್‌ (Indrali Railway Overbridge) ಉದ್ಘಾಟನೆಗೆ ಸಿದ್ಧಗೊಂಡಿದೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಉದ್ಘಾಟಿಸಲಿದ್ದಾರೆ.

ಮಲ್ಪೆಯಿಂದ ಚಿತ್ರದುರ್ಗದ ಮೊಳಕಾಲ್ಮೂರು ನಡುವೆ ರಾಷ್ಟ್ರೀಯ ಹೆದ್ದಾರಿ 169 ಎ ನಿರ್ಮಾಣ ಆಗುತ್ತಿದೆ. ಉಡುಪಿಯ ಇಂದ್ರಾಳಿ ಬಳಿ ರೈಲ್ವೆ ಟ್ರ್ಯಾಕ್ ಹಾದು ಹೋಗುತ್ತದೆ. ಹೆದ್ದಾರಿಯಲ್ಲಿ ರೈಲ್ವೆ ಬ್ರಿಜ್ ಎರಡು ಇಲಾಖೆಯ ಸುಪರ್ದಿಗೆ ಬರೋದ್ರಿಂದ ಹಲವಾರು ತಾಂತ್ರಿಕ ಸಮಸ್ಯೆಗಳಾಗಿತ್ತು. ಸುಮಾರು ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಸಾಕಷ್ಟು ಹೋರಾಟಗಳಾಗಿತ್ತು. ಭಾರಿ ವಾದ ವಿವಾದಗಳು, ಟ್ರೋಲ್‌ಗಳು ನಡೆದಿದ್ದವು. ಇದೀಗ ರೈಲ್ವೆ ಬ್ರಿಡ್ಜ್‌ನ ಕಾಮಗಾರಿ ಪೂರ್ಣಗೊಂಡಿದೆ.

10 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೊಸ ಉಕ್ಕಿನ ಬ್ರಿಡ್ಜ್ ಅನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಕೊಂಕಣ ರೈಲು ಸಂಚಾರಕ್ಕೆ ತಡೆ ಮಾಡದೆ ಈ ಬ್ರಿಡ್ಜ್‌ ನಿರ್ಮಾಣ ಮಾಡಿರುವುದು ವಿಶೇಷ. ಹೊಸ ಬ್ರಿಡ್ಜ್‌ ನಿರ್ಮಾಣದೊಂದಿಗೆ ಅಪಘಾತ, ಒನ್ ವೇ, ಟ್ರಾಫಿಕ್ ಜಾಮ್, ಪಾದಚಾರಿಗಳ-ವಾಹನ ಸವಾರರ ಪರದಾಟಕ್ಕೆ ಪರಿಹಾರ ಸಿಕ್ಕಂತಾಗುತ್ತದೆ. ಉದ್ಘಾಟನೆ ಬಗ್ಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Share This Article