ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ

1 Min Read

ಬಳ್ಳಾರಿ: ಪರಿಶಿಷ್ಟ ಪಂಗಡದ (ST) ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ (Fake Caste Certificate) ವಿತರಣೆ ತಡೆಗಟ್ಟಲು ಒತ್ತಾಯಿಸಿ ಬಳ್ಳಾರಿ ಗ್ರಾಮೀಣ ಶಾಸಕ ಬಿ ನಾಗೇಂದ್ರ (Nagendra) ಮನೆ ಮುಂದೆ ವಾಲ್ಮೀಕಿ ಸಮುದಾಯದ(Valmiki Community Leaders) ಸದಸ್ಯರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಭಾರೀ ಸಂಖ್ಯೆ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗುತ್ತಿವೆ. ಎಸ್‌ಟಿ ಸಮುದಾಯದ ಶಾಸಕರು ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ಬಾಂಗ್ಲಾದಲ್ಲಿ ಮಾತ್ರ ಅಲ್ಲ ನಮ್ಮ ದೇಶದಲ್ಲೂ ಹಿಂದೂಗಳ ಸ್ಥಿತಿ ಹೀನಾಯ: ವಿಶ್ವಪ್ರಸನ್ನ ತೀರ್ಥ ಶ್ರೀ

 

ಶಾಸಕಾಂಗ ಸಭೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ವಿತರಣೆ ಹಾಗೂ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಮುದಾಯದ ಶಾಸಕರು ಧ್ವನಿ ಎತ್ತಬೇಕು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕಾಗಿ ಅನುದಾನ ಕೊಡಬೇಕು. ಎಸ್‌ಟಿ ಸಮುದಾಯದ ಅಭಿವೃದ್ಧಿಗೆ 15,000 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Share This Article