ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್; 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

Public TV
1 Min Read

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ (Valmiki Corporation) ನಡೆದಿದ್ದ ಕೋಟ್ಯಂತರ ರೂ. ಅಕ್ರಮದ ತನಿಖೆ ನಡೆಸುತ್ತಿರುವ ಇಡಿ (Enforcement Directorate) ಅಧಿಕಾರಿಗಳು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲಾಟ್ಸ್ ಹಾಗೂ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿದ್ದ 50 ಲಕ್ಷ ರೂ. ನಗದು ಜಪ್ತಿ ಮಾಡಲಾಗಿತ್ತು. ಇದನ್ನೂ ಓದಿ: ʻಬುರುಡೆʼ ಪ್ರಕರಣದಲ್ಲಿ ಚಿನ್ನಯ್ಯನೇ ಎ1 – ಹಳೆ ಸೆಕ್ಷನ್ ತೆಗೆದು ಹೊಸ ಸೆಕ್ಷನ್ ಹಾಕಿದ SIT

ಕಳೆದ ವರ್ಷ ಮೇ ತಿಂಗಳಿನಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದರು. ನಂತರ ಪ್ರಕರಣ ದಾಖಲಿಸಿಕೊಡಿದ್ದ ರಾಜ್ಯ ಪೊಲೀಸರು ಮತ್ತು ಸಿಬಿಐ ತನಿಖೆ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ಆರೋಪದ ಬಗ್ಗೆ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಇಡಿ ಈ ಕೇಸ್‌ಗೆ ಎಂಟ್ರಿಯಾಗಿತ್ತು. ಇದನ್ನೂ ಓದಿ: ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಹಿನ್ನೆಲೆ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು, ನಿಗಮದ ಹಣವನ್ನ ಅಕ್ರಮವಾಗಿ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿತ್ತು. ದಾಖಲೆಗಳನ್ನು ನಕಲಿ ಮಾಡುವ ಮೂಲಕ ನಿಗಮಕ್ಕೆ 89.63 ಕೋಟಿ ರೂ. ವಂಚಿಸಲಾಗಿತ್ತು.

ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್‌ನಲ್ಲಿ ತೆರೆದ ಖಾತೆಗೆ ಹಣ ವರ್ಗಾಯಿಸಲಾಗಿತ್ತು. ಬಳಿಕ ಹೈದರಾಬಾದ್‌ನಲ್ಲಿರುವ ಫಸ್ಟ್ ಫೈನಾನ್ಸ್ ಬ್ಯಾಂಕ್‌ನಲ್ಲಿ ತೆರೆಯಲಾದ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿತ್ತು. ಹಗರಣದ ಹಣದಲ್ಲಿ ಲ್ಯಾಂಬೋರ್ಗಿನಿ ಕಾರು ಸೇರಿದಂತೆ ಐಷಾರಾಮಿ ವಾಹನಗಳನ್ನ ಖರೀದಿಸಿರುವುದು ಪತ್ತೆಯಾಗಿತ್ತು.

Share This Article