ಸುದೀಪ್ ನಟನೆಯ ‘ಮ್ಯಾಕ್ಸ್’ ಟೀಮ್ ಸೇರಿಕೊಂಡ ವರಲಕ್ಷ್ಮಿ

Public TV
2 Min Read

ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ (Max) ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟಿ ವರಲಕ್ಷ್ಮಿ (Varalakshmi) ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ವರಲಕ್ಷ್ಮಿ ಭಾಗಿಯಾಗಿದ್ದಾರೆ. ಅಧಿಕೃತವಾಗಿಯೇ ಈ ಮಾಹಿತಿಯನ್ನು ಚಿತ್ರತಂಡ ಹೇಳಿಕೊಂಡಿದೆ. ‘ವೆಲ್ ಕಮ್ ಆನ್ ಬೋರ್ಡ್ ಮಹಾಲಕ್ಷ್ಮಿ’ ಎಂದು ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.

ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.

ಮುಂದಿನ ಸಿನಿಮಾ ನಿರ್ದೇಶನ?

ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ಕೆಕೆಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಸುದೀಪ್ ಅವರ ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿತ್ತು. ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

 

ಮೈ ಆಟೋಗ್ರಾಫ್ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್