ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

Public TV
2 Min Read

ಕಾವೇರಿ ನದಿ ನೀರಿನ ವಿಚಾರವಾಗಿ ಮೌನ ವಹಿಸುವ ನಟ ರಜನಿಕಾಂತ್ (Rajinikanth) ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು. ಅವರ ಚಿತ್ರಗಳನ್ನು ರಿಲೀಸ್ ಮಾಡಬಾರದು ಎಂದರು. ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಕಾವೇರಿ ಹೋರಾಟ ಅಥವಾ ಕನ್ನಡ ಪರ ಹೋರಾಟಗಳು ನಡೆದಾಗೊಮ್ಮೆ ರಜನಿಕಾಂತ್ ಹೆಸರು ಪ್ರಸ್ತಾಪವಾಗುತ್ತದೆ. ಈ ಹಿಂದೆ ರಜನಿಕಾಂತ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದು ದೊಡ್ಡ ಮಟ್ಟದಲ್ಲೇ ಹೋರಾಟ ನಡೆದಿತ್ತು. ಸಿನಿಮಾಗಳ ಪ್ರದರ್ಶನವನ್ನೂ ತಡೆದಿದ್ದರು. ಇದೀಗ ಮತ್ತೆ ಅಂಥದ್ದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಾಜ್ಯದಲ್ಲಿ ಐವತ್ತು ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಹೀಗಾಗಿ ಮತ್ತೆ ರಜನಿ ವಿರುದ್ಧ ಗುಡುಗುವಂತಾಗಿದೆ.

ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ

ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Band)ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.

 

ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್