‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಧನಂಜಯ್ ಸ್ಪಷ್ಟನೆ

Public TV
1 Min Read

ಗಾಗಲೇ ರಾಜ್ಯಾದ್ಯಂತ ರಿಲೀಸ್ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ (Dhananjay) ನಟನೆಯ ‘ಹೆಡ್ ಬುಷ್’ (head bush) ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಇದೀಗ ವಿವಾದವಾಗಿ (controversy) ಮಾರ್ಪಟ್ಟಿದೆ.

ವೀರಗಾಸೆ (Veeragase) ಕಲೆಗೆ ಮತ್ತು ಅದಕ್ಕೆ ಸಂಬಂಧಿಸಿದ ವೀರಭದ್ರ ದೇವರಿಗೆ (Veerabhadra God) ಅವಮಾನ ಮಾಡಿದ ನಿರ್ದೇಶಕರು, ಕಲಾವಿದರು ಹಾಗೂ ನಿರ್ಮಾಪಕರು ಕೂಡಲೇ ಕ್ಷಮೆ ಕೇಳಬೇಕು ಹಾಗೂ ಆ ದೃಶ್ಯವನ್ನು ಸಿನಿಮಾದಿಂದ ಕೈ ಬಿಡಬೇಕು ಎಂಬ ಆಗ್ರಹ ಕೂಡ ಕೇಳಿ ಬರುತ್ತಿದೆ. ಈ ಕುರಿತು ನಟ ಧನಂಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಚೇತನ್ ಕಾಂಟ್ರವರ್ಸಿಗೆ ಪ್ರಗತಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

ಧನಂಜಯ್ ಈವರೆಗೂ ಯಾವುದೇ ವಿವಾದಕ್ಕೆ ಒಳಗಾದವರು ಅಲ್ಲ. ಅದರಲ್ಲೂ ಶರಣ ಪರಂಪರೆಯನ್ನು ಓದಿಕೊಂಡು ಬೆಳೆದವರು. ಕಲೆ ಮತ್ತು ಸಂಸ್ಕೃತಿ ಬಗ್ಗೆ ಅಪಾರ ಅಭಿಮಾನ ಹೊಂದಿದವರು. ಈ ಕಾರಣದಿಂದಾಗಿಯೇ ಇಂದು ವೀರಗಾಸೆ ಕಲಾವಿದರನ್ನು ಧನಂಜಯ್ ಭೇಟಿ ಮಾಡುತ್ತಿದ್ದಾರೆ. ಅವರೊಂದಿಗೆ ಆ ದೃಶ್ಯದ ಕುರಿತು ವಿವರಣೆಯನ್ನು ಕೊಡಲಿದ್ದಾರೆ. ಆ ದೃಶ್ಯ ಹಾಗೂ ಅದನ್ನು ಸಿನಿಮಾದಲ್ಲಿ ಯಾಕೆ ಆ ರೀತಿ ಅಳವಡಿಸಲಾಗಿದೆ ಎನ್ನುವ ಕುರಿತು ಚರ್ಚಿಸಲಿದ್ದಾರೆ.

ಇಂದು ವೀರಗಾಸೆ ಕಲಾವಿದರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುತ್ತಿದ್ದೇನೆ. ಕಲಾವಿದರೊಂದಿಗೆ ಚರ್ಚೆ ಮಾಡಿ, ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇನೆ. ನನಗೂ ವೀರಭದ್ರ ದೇವರ ಮೇಲೆ ಅಪಾರ ಭಕ್ತಿ. ವೀರಗಾಸೆ ಕಲೆಯನ್ನು ತುಂಬಾ ಇಷ್ಟ ಪಡುವವನು. ಹಾಗಾಗಿ ನನ್ನಿಂದ ಯಾವುದೇ ಅವಮಾನ ಆಗುವಂತಹ ಕೆಲಸ ಆಗಲ್ಲ ಎಂದಿದ್ದಾರೆ ಧನಂಜಯ್.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *