ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

By
1 Min Read

ಬೆಂಗಳೂರು: ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮುನ್ನ ಸ್ಥಳದಲ್ಲಿರುವ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.

ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ, ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

ಇನ್ನು ಮುಂದೆ ಯಾವುದೇ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ನೋ ಪಾರ್ಕಿಂಗ್ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯವರು ವಾಚಾಳಿತನ ಬಿಡಬೇಕು: ಆರ್ ಅಶೋಕ್

ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *