ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ 50 ವಾಹನಗಳ ನಡುವೆ ಅಪಘಾತ!

Public TV
1 Min Read

– 6 ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ನೋ: ದೆಹಲಿ ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ (Delhi-Meerut Expressway) ದಟ್ಟ ಮಂಜು ಕವಿದ ಪರಿಣಾಮ 50 ವಾಹನಗಳ ನಡುವೆ ಸರಣಿ ಅಪಘಾತ (Accident ) ಸಂಭವಿಸಿದ್ದು, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದ್ದು, ವಿಡಿಯೋ ವೈರಲ್‌ ಆಗಿದೆ.

ಪೊಲೀಸರು ಸಂಚಾರ ದಟ್ಟಣೆಯನ್ನು ತೆರವುಗೊಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article