ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
2 Min Read

ಕೋಲಾರ: ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತ್ (Vemagal-Kurugal Town Panchayat Election) ಘೋಷಣೆಯಾದ ಬಳಿಕ ಇದೇ ಮೊದಲ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ 17 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲೆಡೆ ಶಾಂತಿಯುತವಾಗಿ ಮತದಾನ (Voting) ಪ್ರಕ್ರಿಯೆ ನಡೆಯಿತು.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ಮತದಾನ ಮಾಡಿದರು. ಸರದಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡಿದ್ದು, ಬೆಳಗ್ಗಿನಿಂದ ಮಧ್ಯಾಹ್ನದ ವೇಳೆಗೆ 70% ಮತದಾನ ಪ್ರಕ್ರಿಯೆ ಮುಗಿದಿದ್ರೆ, ಮಧ್ಯಾಹ್ನದ ನಂತರ ಕೊಂಚ ಸುಧಾರಿಸಿತು. ಇದನ್ನೂ ಓದಿ: ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

ಇನ್ನೂ ವೃದ್ದರೊಬ್ಬರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ. ಮತದಾರರನ್ನು ಆಕರ್ಷಿಸಲು ಪಿಂಕ್ ಮತಗಟ್ಟೆ ನಿರ್ಮಾಣ ಮಾಡಿದ್ದು ವಿಶೇಷವಾಗಿ ಕಂಡು ಬಂತು. ಇನ್ನೂ ಕೋಲಾರ ಜಿಲ್ಲಾಧಿಕಾರಿ ಎಂ.ಆರ್.ರವಿ, ಎಸ್ಪಿ ನಿಖಿಲ್, ತಹಶೀಲ್ದಾರ್ ನಯನ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೆಂಕಟೇಶ್ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿರುಸಿನ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಯುವಕರು, ವೃದ್ಧರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದನ್ನೂ ಓದಿ: ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

ಇನ್ನೂ ಮತಗಟ್ಟೆ ಬಳಿ ತಮ್ಮ ಪಕ್ಷ ಹಾಗೂ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು, ಮುಖಂಡರು ಮತಯಾಚನೆ ಮಾಡಿದ್ರು. ಅತಿ ಸೂಕ್ಷ್ಮ ಮತಗಟ್ಟೆಯಾಗಿದ್ದ ವಿಶ್ವನಗರ ಮತಗಟ್ಟೆಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಂಜೆ ವೇಳೆಗೆ 92%ನಷ್ಟು ಮತದಾನ ನಡೆದಿದೆ. ಇನ್ನೂ 17 ವಾರ್ಡ್ಗಳಿಗೆ 13,494 ಮತದಾರರಿದ್ದು, ಇದರಲ್ಲಿ 6,555 ಗಂಡಸರು, 6,939 ಹೆಂಗಸರು. ಒಟ್ಟು 22 ಮತಗಟ್ಟೆಗಳನ್ನ ನಿರ್ಮಾಣ ಮಾಡಲಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

ಇದರಲ್ಲಿ 3 ಅತಿ ಸೂಕ್ಷ್ಮ, 8 ಸೂಕ್ಷ್ಮ ಮತಗಟ್ಟೆಗಳನ್ನ ಮಾಡಲಾಗಿತ್ತು. ಮತದಾನ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ 100 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಪಟ್ಟಣ ಪಂಚಾಯತ್ ಚುನಾವಣೆ ಶಾಂತಿಯುತವಾಗಿ ನಡೆಯಿತು. ಆದ್ರೆ ಅಭ್ಯರ್ಥಿಗಳು ಮಾತ್ರ ಮತದಾರರಿಗೆ ಬೆದರಿಕೆ, ಆಮಿಷಗಳನ್ನ ನೀಡಲಾಗಿತ್ತು, ಕೆಲವೆಡೆ ಆತಂಕವನ್ನ ಸೃಷ್ಠಿ ಮಾಡಲಾಗಿದೆ ಎಂದು ಆರೋಪ ಪ್ರತ್ಯಾರೋಪಗಳನ್ನ ಮಾಡಿಕೊಂಡರು. ಇನ್ನೂ 3 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಅನ್ನೋದು ಎಸ್ಪಿ ನಿಖಿಲ್ ಮಾತು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

Share This Article