ಭಾರತದ ಜೊತೆ ಶೀಘ್ರವೇ ಬಿಗ್‌ ಟ್ರೇಡ್‌ ಡೀಲ್‌ – ಟ್ರಂಪ್‌ ಘೋಷಣೆ

Public TV
2 Min Read

ವಾಷಿಂಗ್ಟನ್‌: ಭಾರತದ (India) ಜೊತೆ ಶೀಘ್ರವೇ ಬಹಳ ದೊಡ್ಡ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ.

ಭಾರತ ಮತ್ತು ಅಮೆರಿಕ (USA) ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ ಸಮಯದಲ್ಲೇ ಟ್ರಂಪ್‌ ಅವರು ಶ್ವೇತ ಭವನದಲ್ಲಿ ನಡೆದ ಬಿಗ್ ಬ್ಯೂಟಿಫುಲ್ ಕಾರ್ಯಕ್ರಮದಲ್ಲಿ ಭಾರತದ ಜೊತೆಗಿನ ಒಪ್ಪಂದ ಬಗ್ಗೆ ಮಾತನಾಡಿದರು.

ಪ್ರತಿಯೊಬ್ಬರೂ ಒಪ್ಪಂದ ಮಾಡಿಕೊಳ್ಳಲು ಮತ್ತು ಅದರಲ್ಲಿ ಭಾಗವಹಿಸಲು ಬಯಸುತ್ತಾರೆ. ನಾವು ನಿನ್ನೆ ಚೀನಾದೊಂದಿಗೆ ಸಹಿ ಹಾಕಿದ್ದೇವೆ. ನಾವು ಕೆಲವು ಉತ್ತಮ ಒಪ್ಪಂದಗಳನ್ನು ಹೊಂದಿದ್ದೇವೆ. ಬಹುಶಃ ಭಾರತದೊಂದಿಗೆ ಬಹಳ ದೊಡ್ಡ ಒಪ್ಪಂದ ಮಾಡುತ್ತಿದ್ದೇವೆ. ಈ ವೇಳೆ ಅವರು ನಾವು ಎಲ್ಲರೊದಿಗೆ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಕೆಲವರಿಗೆ ಮಾತ್ರ ಪತ್ರ ಕಳುಹಿಸುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

ಮೆಗಾ ವ್ಯಾಪಾರ ಒಪ್ಪಂದದ ಕುರಿತು ನಾಲ್ಕು ದಿನಗಳ ಮಾತುಕತೆ ವೇಳೆ ಎರಡೂ ದೇಶಗಳಲ್ಲಿ ಕೈಗಾರಿಕಾ ಮತ್ತು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶ, ಸುಂಕ ಕಡಿತ ಮತ್ತು ಸುಂಕ ರಹಿತ ವ್ಯಾಪಾರದ ಬಗ್ಗೆ ಚರ್ಚೆ ನಡೆಸಲಾಗಿದೆ.

ಮಾತುಕತೆ ವೇಳೆ ಎರಡು ದೇಶಗಳ ನಡುವೆ ಪ್ರಸ್ತುತ ಇರುವ 190 ಬಿಲಿಯನ್ ಡಾಲರ್‌ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 2023ರ ವೇಳೆಗೆ 500 ಬಿಲಿಯನ್ ಡಾಲರ್‌ಗೆ ಕೊಂಡೊಯ್ಯುವ ಗುರಿಯನ್ನು ಹಾಕಲಾಗಿದೆ.

ಚೀನಾದ ಜೊತೆ ಅಮೆರಿಕದ ವ್ಯಾಪಾರ ಒಪ್ಪಂದದ ವಿವರ ಲಭ್ಯವಾಗದೇ ಇದ್ದರೂ ಅಪರೂಪದ ಭೂ ಖನಿಜ ರಫ್ತನ್ನು ತ್ವರಿತಗೊಳಿಸಲು ಈ ಒಪ್ಪಂದ ಗಮನಹರಿಸಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

Share This Article