ಹಿರಿಯ ನಟಿ ಬಿ. ಸರೋಜಾದೇವಿ ನಿಧನ – ಡಿಕೆಶಿ ಸಂತಾಪ

Public TV
1 Min Read

ಬೆಂಗಳೂರು: ಹಿರಿಯ ನಟಿ ಬಿ.ಸರೋಜಾ ದೇವಿ (B Saroja Devi) ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿ ಸರೋಜಾ ದೇವಿ ಒಬ್ಬ ಹಿರಿಯ ತಾರೆ. ನನಗೆ ಬಹಳ ಆತ್ಮೀಯರಾಗಿದ್ದರು. ಅನೇಕ ಸಂದರ್ಭದಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ ಅವರ ಆರೋಗ್ಯ ಸಲ್ಪ ಹೆಚ್ಚುಕಮ್ಮಿ ಆಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ.

ಮಾತ್ರವಲ್ಲದೇ ಭಾರತದ ಅನೇಕ ಚಿತ್ರನಟರ ಜೊತೆ ನಟಿಸಿದ್ದರು. ಅವರ ಅಭಿಮಾನಿಗಳಿಗೆ, ಬಂಧುಗಳಿಗೆ ಭಗವಂತ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಪದ್ಮಭೂಷಣ ಪುರಸ್ಕೃತರಾಗಿರುವ ಸರೋಜಾದೇವಿ ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಜನವರಿ 7, 1938 ರಲ್ಲಿ ಜನಿಸಿದ ಹಿರಿಯ ನಟಿ ಬಿ ಸರೋಜಾದೇವಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅಂತ್ಯಕ್ರಿಯೆ ನಡೆಯಲಿದೆ.

Share This Article