ʻಜೈ ಶ್ರೀರಾಮ್‌, ಜೈ ಶ್ರೀರಾಮ್‌ʼ ಹಾಡಿಗೆ ನೂರಾರು ಟೆಸ್ಲಾ ಕಾರು ಡಾನ್ಸ್

Public TV
2 Min Read

ವಾಷಿಂಗ್ಟನ್‌: ಅಯೋಧ್ಯೆ ರಾಮಮಂದಿರದಲ್ಲಿ (Ram Mandir) ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಗಾಗಿ ಇಡೀ ಅಯೋಧ್ಯೆ (Ayodhya Ram Mandir) ರಾಮಮಯವಾಗಿ ಸಿಂಗಾರಗೊಳ್ಳುತ್ತಿದೆ. ಎಲ್ಲೆಲ್ಲೂ ರಾಮನಾಮ, ರಾಮಭಕ್ತಿ, ರಾಮಜಪ (Ram Paths) ಕೇಳಿಬರುತ್ತಿದೆ. ನೂರಾರು ವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿರುವುದಕ್ಕೆ ರಾಮಭಕ್ತರು ಸಂತಸಗೊಂಡಿದ್ದಾರೆ.

ವಿದೇಶಗಳಲ್ಲೂ ಶ್ರೀರಾಮನ ಮಹಿಮೆ ಕಂಡುಬರುತ್ತಿವೆ. ಪ್ರಾಣಪ್ರತಿಷ್ಠಾಪನೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದುಕುಳಿತಿವೆ. ಈ ನಡುವೆ ವಿಶ್ವದ ಪ್ರತಿಷ್ಠಿತ ಕಾರು ಕಂಪನಿಯಾದ ಟೆಸ್ಲಾ (Tesla Car), ಆದಿಪುರುಷ್‌ ಚಿತ್ರದ ʻಜೈ ಶ್ರೀರಾಮ್‌, ಜೈ ಶ್ರೀರಾಮ್‌ ರಾಜಾರಾಮ್‌ʼ ಹಾಡಿಗೆ ವಿಶೇಷ ಗೌರವ ಸೂಚಿಸುವುದಕ್ಕಾಗಿ ತನ್ನ ಕಾರುಗಳನ್ನು ಬಳಸಿಕೊಂಡು ಲೈಟ್ ಮೂಲಕ ಡಾನ್ಸ್ (Dance) ಮಾಡಿಸಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್

ವಿಶ್ವಹಿಂದೂ ಪರಿಷತ್‌ ಅಮೆರಿಕದ ಘಟಕ ಆಯೋಜಿಸಿದ್ದ ಮ್ಯೂಸಿಕಲ್‌ ಲೈಟ್‌ಶೋ ಕಾರ್ಯಕ್ರಮದಲ್ಲಿ ಟೆಸ್ಲಾ ಕಂಪನಿಯ ಕಾರುಗಳ ಲೈಟ್‍ ಗಳು ಡಾನ್ಸ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ: ಮೈಸೂರಿನಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಮರು!

ಈ ಹಿಂದೆಯೂ ನೂರಾರು ಕಾರುಗಳನ್ನು ಸಾಲು-ಸಾಲಾಗಿ ನಿಲ್ಲಿಸಿ, ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡಿಗೆ ಇದೇ ರೀತಿ ಡಾನ್ಸ್‌ ಮಾಡಿಸಲಾಗಿತ್ತು. ಇದೀಗ, ದೇಶದೆಲ್ಲೆಡೆ ಶ್ರೀರಾಮನ ಸದ್ದು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶ್ರೀರಾಮನಿಗೆ ನೃತ್ಯದ ಮೂಲಕ ವಿಶೇಷ ಗೌರವವನ್ನು ಟೆಸ್ಲಾ ಕಂಪನಿ ಸಲ್ಲಿಸಿದೆ.

ಈ ವೀಡಿಯೋವನ್ನು ಟೆಸ್ಲಾ ಕಂಪನಿ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದೆ. ಇದಕ್ಕೆ ರಾಮಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ 

Share This Article