ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
1 Min Read

– ಎನ್‌ಡಿಎ ಅಭ್ಯರ್ಥಿ ಬೆಂಬಲಿಸೋದಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿಕೆ
– ವೈಎಸ್‌ಆರ್‌ಸಿಪಿಯಿಂದ ಸಿಪಿಆರ್‌ಗೆ ಬೆಂಬಲ

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ಜೆಡಿಯು ಅಧ್ಯಕ್ಷ, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರು ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ನಿರ್ಧಾರವನ್ನು ಸ್ವಾಗತಿಸಲಾಗುತ್ತದೆ. ರಾಧಾಕೃಷ್ಣನ್‌ ಅವರಿಗೆ ಜೆಡಿಯು ಬೆಂಬಲಿಸುತ್ತದೆ. ಅವರಿಗೆ ಶುಭಾಶಯಗಳು ಎಂದು ಎಕ್ಸ್‌ ಖಾತೆಯಲ್ಲಿ ನಿತೀಶ್‌ ಕುಮಾರ್‌ ಪೋಸ್ಟ್‌ ಮಾಡಿದ್ದಾರೆ.

ಬಿಜೆಪಿ ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದ ಒಂದು ದಿನದ ನಂತರ ನಿತೀಶ್‌ ಬೆಂಬಲದ ಮಾತನಾಡಿದ್ದಾರೆ. ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಮೈತ್ರಿಕೂಟವು ಸರ್ವಾನುಮತದ ಚುನಾವಣೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದರು. ಮುಂದಿನ ಉಪಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದ್ದರು.

ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು ಜಾರ್ಖಂಡ್, ತೆಲಂಗಾಣ ಮತ್ತು ಪುದುಚೇರಿಯಲ್ಲಿ ರಾಜ್ಯಪಾಲರ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಿಜೆಪಿಯ ಹಿರಿಯ ನಾಯಕರಾಗಿರುವ ಅವರು, ಲೋಕಸಭೆಯಲ್ಲಿ ಎರಡು ಬಾರಿ ಕೊಯಮತ್ತೂರು ಪ್ರತಿನಿಧಿಸಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Share This Article