ಕೀರ್ತಿ ಜೊತೆಗಿನ ವಿಜಯ್ ದೇವರಕೊಂಡ ಹೊಸ ಸಿನಿಮಾಗೆ ಮುಹೂರ್ತ

Public TV
1 Min Read

ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarkonda) ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿ (Hyderabad) ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. `ರಾಜಾ ವಾರು ರಾಣಿ ಗಾರು’ ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕಟ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಇದನ್ನೂ ಓದಿ: ನಾನು ಭೇಟಿಯಾದ ಅದ್ಭುತ ವ್ಯಕ್ತಿಗಳಲ್ಲಿ ದರ್ಶನ್ ಸಹ ಒಬ್ಬರು – ಡೆವಿಲ್ ನಾಯಕಿ ರಚನಾ ರೈ

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ.

ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಸ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.ಇದನ್ನೂ ಓದಿ: ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ – ಕಾಂತಾರ ಕ್ಲೈಮ್ಯಾಕ್ಸ್‌ ಶೂಟಿಂಗ್‌ ವೇಳೆ ಸುಸ್ತಾಗಿ ಮಲಗಿದ್ದ ರಿಷಬ್

Share This Article