ಓವೆಲ್ ಟೆಸ್ಟ್ ವೀಕ್ಷಿಸಲು ಬಂದ ವಿಜಯ್ ಮಲ್ಯ

Public TV
1 Min Read
vijay mallya

ಲಂಡನ್: ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ವೀಕ್ಷಿಸಲು ವಿಜಯ್ ಮಲ್ಯ ಆಗಮಿಸಿದ್ದಾರೆ.

ಪಂದ್ಯ ನೋಡಲು ಮಲ್ಯ ಕ್ರೀಡಾಂಗಣ ಪ್ರವೇಶ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಲಂಡನ್ ನಲ್ಲಿ ನೆಲೆಸಿರುವ ಮಲ್ಯ ಈ ಹಿಂದೆಯೂ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಿದ್ದರು.

ಭಾರತದ ವಿವಿಧ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡದೇ ಇಂಗ್ಲೆಂಡ್ ಗೆ ಪಲಾಯನ ಮಾಡಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅಲ್ಲದೇ ಇಂಗ್ಲೆಂಡಿನಿಂದ ಗಡಿಪಾರು ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ತಿಳಿಸಿದೆ. ಇನ್ನು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಸೆಪ್ಟೆಂಬರ್ 3ರಂದು ಮಲ್ಯರಿಗೆ ನೋಟಿಸ್ ಜಾರಿ ಮಾಡಿ 1 ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.

ಈ ಹಿಂದೆ ಭಾರತಕ್ಕೆ ಮಲ್ಯರನ್ನು ಗಡಿಪಾರು ಮಾಡುವ ಕುರಿತು ಲಂಡನ್ ನ್ಯಾಯಾಲಯ ಮುಂಬೈ ಜೈಲಿನ ಸ್ಥಿತಿ ಕುರಿತು ಮಾಹಿತಿ ಕೋರಿತ್ತು. ನ್ಯಾಯಾಲಯದ ಸೂಚನೆಯಂತೆ ಸಿಬಿಐ ಅಧಿಕಾರಿಗಳು ಮುಂಬೈ ಆರ್ಥರ್ ರೋಡ್ ಜೈಲಿನ ವೀಡಿಯೋವನ್ನು ಸಲ್ಲಿಸಿದ್ದರು. ಆದರೆ ಮಲ್ಯ ಭಾರತದ ಜೈಲುಗಳು ಅಮಾನವೀಯವಾಗಿದೆ, ಅಲ್ಲಿ ಬೆಳಕು ಇಲ್ಲ ಎಂದು ದೂರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article