ವಿಜಯ ರಾಘವೇಂದ್ರ ನಟನೆಯ ಹೊಸ ಸಿನಿಮಾ ‘ಜೋಗ್ 101’ : ಫಸ್ಟ್ ಲುಕ್ ರಿಲೀಸ್

Public TV
1 Min Read

ಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ (Vijay Raghavendra) ‘ಜೋಗ್ 101’ (Jog 101) ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ (First Look) ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು (ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ (Vijay Kannadiga) ಈ ಚಿತ್ರದ ನಿರ್ದೇಶಕರು. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ ಜೋಗ್ 101 ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ. ಇದನ್ನೂ ಓದಿ:ಅಭಿದಾಸ್‌, ಶರಣ್ಯ ಶೆಟ್ಟಿ ನಟನೆಯ ‌’ನಗುವಿನ ಹೂಗಳ ಮೇಲೆ’ ಸಿನಿಮಾದ ಸಾಂಗ್ ಔಟ್

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ ಜೋಗ್ 101 ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್