– ಕಾಲ್ತುಳಿತ ದುರಂತ ಸಂಬಂಧ ಕೇಸ್ ದಾಖಲು; ಪ್ರಾಥಮಿಕ ತನಿಖೆ ಶುರು
ಚೆನ್ನೈ: ತಮಿಳುನಾಡು ಕರೂರಿನಲ್ಲಿ (Karur) ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ (TVK Vijay Rally Stampede) ಸಂಭವಿಸಿ ಘೋರ ದುರಂತವೇ ನಡೆದುಹೋಗಿದೆ. ಘಟನೆಯಲ್ಲಿ ಮೃತಪಟ್ಟ 39 ಜನರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ.
ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಜನ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಜಯ್ ನೋಡೋದಕ್ಕೆ ಮಕ್ಕಳೂ ಊಟ, ತಿಂಡಿ ಬಿಟ್ಟು ನಿಂತಿದ್ರು, ಕೆಲವರು ನೀರಿಗಾಗಿ ಚೀರಾಡ್ತಿದ್ರು: ಪ್ರತ್ಯಕ್ಷದರ್ಶಿ ಹೇಳಿಕೆ
ಪ್ರಸ್ತುತ ಕರೂರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಗೆ (Karur Hospital) ಕಾಲ್ತುಳಿತದಲ್ಲಿ ಗಾಯಗೊಂಡ 50 ಜನರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೂರಿನ ಖಾಸಗಿ ಆಸ್ಪತ್ರೆಗಳಲ್ಲಿ 61 ಜನರೂ ಸೇರಿ ಒಟ್ಟು 111 ಜನರು ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: Vijay Rally Stampede | ಸಾವಿನ ಸಂಖ್ಯೆ 39ಕ್ಕೆ ಏರಿಕೆ – 48 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
39 ಮಂದಿ ಸಾವು ಚಿಕಿತ್ಸೆ
ಸ್ಥಳಪರಿಶೀಲನೆ ನಡೆಸಿದ ಎಡಿಜಿಪಿ ಡೇವಿಡ್ ಸನ್ ಆಶಿರ್ವಾದ್ ಮಾತನಾಡಿ, 10,000 ಜನ ಸೇರುತ್ತಾರೆ ಅಂತ ಅನುಮತಿ ಪಡೆದಿದ್ದರು. ಹೀಗಾಗಿ 116 ಸ್ಥಳೀಯ ಪೊಲೀಸರು ಹೊರತುಪಡಿಸಿ ಹೆಚ್ಚುವರಿ 500 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಈ ಹಿಂದೆಯೂ 15,000 ಜನಕ್ಕೆ 600 ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಆದ್ರೆ ಇಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ಲಾಠಿ ಚಾರ್ಜ್ ಮಾಡಿಲ್ಲ, ದುರಂತಕ್ಕೆ ಕಾರಣಗಳನ್ನ ಪಟ್ಟಿ ಮಾಡಿದ್ದೇವೆಂದು ತಿಳಿಸಿದ್ದಾರೆ.
ಪ್ರಕರಣ ದಾಖಲು
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಳಿಸಿಕೊಂಡಿದ್ದು, ಪ್ರಾಥಮಿಕ ತನಿಖೆ ಶುರು ಮಾಡಲಾಗಿದೆ ಎಂದು ಕೂಡ ಎಡಿಜಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್ ಮೊದಲ ಪ್ರತಿಕ್ರಿಯೆ