ಪುನೀತ್ ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿಲ್ಲ: ವಿಜಯ್ ಸೇತುಪತಿ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿಗೆ ಕಾಲಿವುಡ್ ಸ್ಟಾರ್ ನಟ ವಿಜಯ್ ಸೇತುಪತಿ ನಮನ ಸಲ್ಲಿಸಿದರು.

ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 7 ದಿನಕಳೆದಿದ್ದು, ಬುಧವಾರ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿ ಪುನೀತ್ ಸಮಾಧಿ ದರ್ಶನ ಪಡೆದರು. ಇದೇ ವೇಳೆ ಪುನೀತ್ ಸಾವಿನ ಬಗ್ಗೆ ನೋವು ತೋಡಿಕೊಂಡರು. ಇದನ್ನೂ ಓದಿ: ಶಿರವಾಳ ಗ್ರಾಮದ ವೃತ್ತಕ್ಕೆ ಪುನೀತ್ ಹೆಸರು ನಾಮಕರಣ

ಪುನೀತ್ ರಾಜ್‍ಕುಮಾರ್ ಫ್ಯಾನ್ ನಾನು. ಅವರನ್ನು ಇದುವರೆಗೆ ಭೇಟಿ ಆಗಿಲ್ಲ. ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ನನ್ನ ಸಿನಿಮಾ ನೋಡಿ ಒಂದು ಸಲ ಫೋನ್ ಮಾಡಿದ್ದರು. ಆಗ ಬಹಳ ಪ್ರೀತಿಯಿಂದ ಮಾತಾಡಿದರು. ಅವರಿಲ್ಲ ಎನ್ನುವುದನ್ನು ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ನನಗೆ ಅರ್ಥ ಮಾಡಿಕೊಳ್ಳಲು, ಈ ಸತ್ಯವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ: ರಾಮ್ ಚರಣ್ ತೇಜಾ

ಬುಧವಾರ ಟಾಲಿವುಡ್ ನಟ ರಾಮ್‍ಚರಣ್ ತೇಜ ಅವರು ಶಿವರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ತುಂಬಾ ದುಃಖವಾಗುತ್ತಿದೆ. ನನಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ, ಈ ಸತ್ಯವನ್ನ ಅರಗಿಸಿಕೊಳ್ಳಲು ಆಗುತ್ತಿಲ್ಲ. ಯಾರಿಗೆ ಏನಾದರೂ ಆದರೆ ನಮಗೆ ಅರ್ಥವಾಗುತ್ತೆ. ಆದರೆ ಪುನೀತ್ ಅವರಿಗೆ ಈ ರೀತಿಯಾಗಿದ್ದು, ನನಗೆ ನಿಜವಾಗಿಯೂ ತುಂಬಾ ದುಃಖ ತಂದಿದೆ ಎಂದು ಸಂತಾಪ ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *