68ನೇ ಚಿತ್ರಕ್ಕೆ 150 ಕೋಟಿ ಸಂಭಾವನೆ ಪಡೆದುಕೊಂಡ ದಳಪತಿ ವಿಜಯ್

Public TV
1 Min Read

ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರು ‘ವಾರಿಸು’ (Varisu) ಸಿನಿಮಾದ ಸೂಪರ್ ಸಕ್ಸಸ್ ನಂತರ ‘ಲಿಯೋ’ (Leo Film) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ತಮ್ಮ ಮುಂದಿನ 68ನೇ ಚಿತ್ರದ ಬಗ್ಗೆ ಅಪ್‌ಡೇಟ್‌ ಹಂಚಿಕೊಂಡಿದ್ದರು.  ಈ ಚಿತ್ರಕ್ಕೆ ತಮ್ಮ ಸಂಭಾವನೆಯನ್ನ ಕೂಡ ಹೆಚ್ಚಿಕೊಂಡಿದ್ದಾರೆ.

ಈ ವರ್ಷ ‘ವಾರಿಸು’ ಸಿನಿಮಾದ ಮೂಲಕ ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡರು. ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ರೊಮ್ಯಾನ್ಸ್, ಆ್ಯಕ್ಷನ್ ಧಮಾಕ ಮೂಲಕ ವಿಜಯ್ ಅಬ್ಬರಿಸಿದ್ದರು. ಚಿತ್ರ ಕೂಡ ಕೋಟಿ ಕೋಟಿ ಕಲೆಕ್ಷನ್ ಮಾಡಿ ನಿರ್ಮಾಪಕರ ಜೇಬು ತುಂಬಿಸುವಲ್ಲಿ ಯಶಸ್ವಿಯಾಗಿತ್ತು.

ಇದೀಗ ತ್ರಿಷಾ ಕೃಷ್ಣನ್ (Thrisha Krishnan) ಜೊತೆ ‘ಲಿಯೋ’ (Leo) ಸಿನಿಮಾ ಮಾಡ್ತಿದ್ದಾರೆ ದಳಪತಿ ವಿಜಯ್. ವಾರಿಸು, ಲಿಯೋ ಎರಡು ಚಿತ್ರಕ್ಕೂ 100 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದ ವಿಜಯ್ ಇದೀಗ ತಮ್ಮ 68ನೇ ಚಿತ್ರಕ್ಕೆ 50 ಕೋಟಿ ರೂಪಾಯಿ ಹೆಚ್ಚಿಸಿಕೊಂಡಿದ್ದಾರೆ. ವೆಂಕಟ್ ಪ್ರಭು ನಿರ್ದೇಶನದ ಚಿತ್ರಕ್ಕೆ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಹಣಕ್ಕಾಗಿ ನಾನು ಯಾರ ಹಿಂದೆಯೂ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

ದಕ್ಷಿಣ ಭಾರತದಲ್ಲಿ 100 ಕೋಟಿ ರೂಪಾಯಿ ಪಡೆಯುವ ಹೀರೋಗಳಿದ್ದಾರೆ. ಆದರೆ ಈಗ ವಿಜಯ್ 150 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

Share This Article