ಬಾಲಿವುಡ್ (Bollywood) ಮತ್ತು ಸೌತ್ ಸಿನಿ ಅಂಗಳದಲ್ಲಿ ಸದ್ಯ ಸದ್ದು ಮಾಡ್ತಿರುವ ವಿಚಾರ ಅಂದರೆ ವಿಜಯ್ ವರ್ಮಾ (Vijay Varma) ಮತ್ತು ನಟಿ ತಮನ್ನಾ ಭಾಟಿಯಾ (Tamanna Bhatia) ಡೇಟಿಂಗ್ ಸುದ್ದಿ. ಈ ಬೆನ್ನಲ್ಲೇ ಇದೀಗ ಪ್ರೇಮಿಗಳ ದಿನದಂದು ವಿಶೇಷವಾಗಿ ವಿಶ್ ಮಾಡುವ ಮೂಲಕ ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನ ವಿಜಯ್ ವರ್ಮಾ ಶೇರ್ ಮಾಡಿದ್ದಾರೆ.


View this post on Instagram
ಸೌತ್ ನಟಿ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ, `ಲಸ್ಟ್ ಸ್ಟೋರಿ -2′ (Lust Story -2) ಸಿನಿಮಾ ಚಿತ್ರೀಕರಣದಲ್ಲಿ ಮೊದಲು ಭೇಟಿಯಾಗಿದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿದೆ. ಇಬ್ಬರೂ ಕದ್ದು ಮುಚ್ಚಿ ಪ್ರೀತಿ ಮಾಡುತ್ತಿದ್ದರು. ಆದರೆ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಇಬ್ಬರ ಪ್ರೀತಿ ಬಹಿರಂಗವಾಗಿದೆ. ಇನ್ನೂ ಸದ್ಯದಲ್ಲೇ ಈ ಜೋಡಿ ಕೂಡ ಮದುವೆಯ ಬಗ್ಗೆ ಗುಡ್ ನ್ಯೂಸ್ ಕೊಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
