ವಿಕೋಪಕ್ಕೆ ತಿರುಗಿದ ಸ್ಟಾರ್‌ ವಾರ್‌ – 15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

1 Min Read

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ (Social Media) ತನ್ನ ವಿರುದ್ಧ ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್‌ ಕ್ರೈಂ (Cyber Crime) ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌

- Advertisement -

- Advertisement -

ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್‌ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದಾರೆ.

- Advertisement -

ದೂರು ನೀಡಿದ ಬಳಿಕ ಮಾಧ್ಯಮಗಳು ವಿಜಯಲಕ್ಷ್ಮಿ ಅವರನ್ನು ಮಾತನಾಡಲು ಪ್ರಯತ್ನಿಸಿದವು. ಆದರೆ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡದೇ ಕಾರು ಹತ್ತಿ ತೆರಳಿದರು.

Share This Article