ಗಾಂಧಿ ಜಯಂತಿಯಂದು 31ನೇ ಜಿಲ್ಲೆ ವಿಜಯನಗರಕ್ಕೆ ಅಧಿಕೃತ ಚಾಲನೆ

Public TV
2 Min Read

ವಿಜಯನಗರ: ರಾಜ್ಯದ 31ನೇ ಜಿಲ್ಲೆಯಾಗಿ ಉದಯವಾಗಿರುವ ವಿಜಯನಗರ ಜಿಲ್ಲೆಯ ಉದ್ಘಾಟನೆ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ನಡೆಯಲಿದೆ. ಕಳೆದ ಫೆಬ್ರವರಿಯಲ್ಲಿ ಅಧಿಕೃತ ಘೋಷಣೆಯಾಗಿದ್ದ ವಿಜಯನಗರ ಜಿಲ್ಲೆಗೆ ಹಾಲಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಇಬ್ಬರು ಸೇರಿ ಸರಳವಾಗಿ ಚಾಲನೆ ನೀಡಲಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಳ್ಳಾರಿ ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಆನಂದ್ ಸಿಂಗ್, ಗಾಂಧಿ ಜಯಂತಿ ದಿನ ರಾಜ್ಯದ ನೂತನ ಜಿಲ್ಲೆ ವಿಜಯನಗರಕ್ಕೆ ಚಾಲನೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೋಟ್‍ನಲ್ಲಿ ನದಿ ದಾಟಿ ರೈತರ ಮನೆಯಂಗಳದಲ್ಲಿ ‘ಅನ್ನದಂಗಳದ ಮಾತುಕತೆ’

ಸಾಕಷ್ಟು ವಿರೋಧದ ನಡುವೆಯೂ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಿರೋ ರಾಜ್ಯ ಸರ್ಕಾರದ ನಡೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕಳೆದ ಫೆಬ್ರವರಿ 8 ರಂದು ಅಧಿಕೃತವಾಗಿ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ ಯಾವುದೇ ವ್ಯವಸ್ಥೆಗಳನ್ನು ನೀಡಿರಲಿಲ್ಲ. ಆದರೆ ಇದೀಗ ಅ.2 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ನೂತನ ಜಿಲ್ಲೆಗೆ ಚಾಲನೆ ನೀಡಲಿದ್ದಾರೆ ಎಂದರು.

ಸಿಎಂ ಬಸವರಾಜ್ ಬೊಮ್ಮಾಯಿಯವರು ವಿಜಯನಗರ ಜಿಲ್ಲೆಗೆ ಚಾಲನೆ ನೀಡುವುದರ ಜೊತೆಗೆ ನಾನಾ ಅಭಿವೃದ್ಧಿ ಕಾರ್ಯಗಳಿಗೂ ಕೂಡ ಚಾಲನೆ ನೀಡಲಿದ್ದಾರೆ. ಜಿಲ್ಲೆ ಕಾರ್ಯಾರಂಭ ಮಾಡುವ ಸಂದರ್ಭದಲ್ಲಿ ಅನೇಕ ಸವಾಲುಗಳಿರುತ್ತವೆ. ಕಚೇರಿಗಳ ಕಾರ್ಯಾರಂಭ ಮಾಡುವುದು, ಯುವ ಮತ್ತು ಉತ್ಸಾಹಿ ಹಾಗೂ ಅನುಭವಿ ಅಧಿಕಾರಿಗಳನ್ನು ಕರೆತರುವುದು. ಈ ಭಾಗದ ಜನರು ವಿವಿಧ ಸರ್ಕಾರಿ ಸೌಲಭ್ಯಗಳಿಗೆ ಬಳ್ಳಾರಿಗೆ ಅಲೆದಾಡುವುದನ್ನು ತಪ್ಪಿಸಿ, ಎಲ್ಲ ಸೌಲಭ್ಯಗಳನ್ನು ವಿಜಯನಗರದಲ್ಲಿ ಸಿಗುವಂತೆ ನೋಡಿಕೊಳ್ಳಬೇಕಿದೆ. ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳು ಆರಂಭ ಮಾಡುವ ಸಂದರ್ಭದಲ್ಲಾದ ಲೋಪಗಳನ್ನು ಗಮನದಲ್ಲಿಟ್ಟುಕೊಂಡು ಈ ಜಿಲ್ಲೆಯಲ್ಲಿ ಆ ರೀತಿಯ ಸಮಸ್ಯೆಗಳಾಗದಂತೆ ಜಿಲ್ಲೆಯನ್ನು ಕಟ್ಟುವ ಮೂಲಕ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

ಹೊಸಪೇಟೆಯ ಟಿಎಸ್‍ಪಿ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗುತ್ತಿರುವ ಜಿಲ್ಲಾಡಳಿತ ಕಟ್ಟಡ 6 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದೆ. ಈಗಾಗಲೇ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರಿಗನೂರ ಬಳಿಯ ಇಎಸ್‍ಐ ಕಟ್ಟಡದಲ್ಲಿ ಎಸ್ಪಿ ಕಚೇರಿ ಸ್ಥಾಪಿಸಲಾಗುತ್ತಿದೆ. ಟಿಎಸ್‍ಪಿ ಕಚೇರಿ ಆವರಣದಲ್ಲಿಯೇ 35 ಎಕರೆ ವಿಶಾಲ ಜಾಗದಲ್ಲಿ ಮೆಡಿಸಿಟಿ ಸ್ಥಾಪಿಸಲಾಗುತ್ತಿದೆ ಎಂದರು. ಇದರಲ್ಲಿ 110 ಕೋಟಿ ವೆಚ್ಚದ 250 ಹಾಸಿಗೆ ಆಸ್ಪತ್ರೆ, ಮೆಡಿಕಲ್ ಕಾಲೇಜು, ನಸಿರ್ಂಗ್ ಕಾಲೇಜುಗಳಿರಲಿವೆ. ಒಟ್ಟಾರೆ ವಿಜಯನಗರ ಜಿಲ್ಲೆಯ ಜಿಲ್ಲಾಡಳಿತ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, ಈ ಭಾಗದ ಜನರಿಗೆ ಸಾಕಷ್ಟು ಖುಷಿ ತಂದಿದೆ.

Share This Article
Leave a Comment

Leave a Reply

Your email address will not be published. Required fields are marked *