ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು – ಓರ್ವನ ಮೃತದೇಹ ಪತ್ತೆ

Public TV
1 Min Read

ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ ಮುಗುಚಿ ಜನರು ನೀರುಪಾಲಾಗಿರುವ ದುರ್ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ಕಾರ್ಯಾಚರಣೆ ವೇಳೆ ಓರ್ವನ ಮೃತದೇಹ ಪತ್ತೆಯಾಗಿದೆ.

ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ಆರು ಮಂದಿ ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

Share This Article