ವಿಜಯಪುರ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 27 ರೌಡಿಶೀಟರ್‌ಗಳ ಗಡಿಪಾರಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಜ್ಜಾಗಿದೆ.
ಜಿಲ್ಲೆಯಲ್ಲಿ ಒಟ್ಟು 1,212 ರೌಡಿಶೀಟರ್‌ಗಳಿದ್ದು, 400ಕ್ಕೂ ಹೆಚ್ಚು ಗುಂಡಾಗಳಿದ್ದಾರೆ. ಆ ಪೈಕಿ ಸದ್ಯ 27 ರೌಡಿಶೀಟರ್‌ಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಉಪವಿಭಾಗ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ.ಇದನ್ನೂ ಓದಿ: ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
27 ರೌಡಿಶೀಟರ್‌ಗಳ ಪೈಕಿ ಸದ್ಯ 8 ರೌಡಿಶೀಟರ್‌ಗಳನ್ನ ಗಡಿಪಾರು ಮಾಡುವಂತೆ ಉಪವಿಭಾಗ ಅಧಿಕಾರಿಗಳು ಆದೇಶ ಹೊರಡಿಸಿದ್ದು, ಇನ್ನುಳಿದ 19 ರೌಡಿಶೀಟರ್‌ಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ರೌಡಿಶೀಟರ್‌ಗಳ ಗಡಿಪಾರು ಆದೇಶ ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.