ವಿಜಯಪುರ: ಡೋಣಿ ನದಿ (Doni River) ಉಕ್ಕಿ ಹರಿಯುತ್ತಿದ್ದು, ತಾಳಿಕೋಟಿ (Talikoti) ಪಟ್ಟಣದಲ್ಲಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರನೊಬ್ಬ ಬೈಕ್ ಸಮೇತ ನೀರುಪಾಲಾಗಿದ್ದಾನೆ.
ನೀರುಪಾಲಾದ ಯುವಕನನ್ನು ಸಂತೋಷ ಹಡಪದ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಹಿಂಬದಿ ಸವಾರ ಅಪಾಯದಿಂದ ಪಾರಾಗಿದ್ದಾನೆ. ಮಹಾಂತೇಶ ಹೊಸಗೌಡ (20) ಅಪಾಯದಿಂದ ಪಾರಾದ ಯುವಕ. ಇಬ್ಬರೂ ವಡವಡಗಿಯಿಂದ ತಾಳಿಕೋಟಿ ಪಟ್ಟಣಕ್ಕೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್ ಮಾಡಿ ಕಲ್ಲು ತೂರಾಟ
ಸೇತುವೆ ಮುಳುಗಡೆಯಾಗಿದ್ದರಿಂದ ತಾಳಿಕೋಟಿ ವಿಜಯಪುರ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಯುವಕರು ಬೈಕ್‍ನಲ್ಲಿ ತೆರಳುವ ದುಸ್ಸಾಹಸ ಮಾಡಿದ್ದು ಈ ಅವಘಡಕ್ಕೆ ಕಾರಣವಾಗಿದೆ. ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೀರು ಪಾಲಾದ ಯುವಕನ ಹುಡಾಕಾಟಕ್ಕೆ ಪೊಲೀಸರು ಹಾಗೂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದ ಪತಿ ಮಂಜುನಾಥ್
