– ದಳಪತಿ ವಿಜಯ್ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ 36 ಮಂದಿ ಬಲಿ
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur Stampede) ನಟ, ರಾಜಕಾರಣಿ ವಿಜಯ್ (Vijay) ಅವರ ರ‍್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 34 ಮಂದಿ ಸಾವನ್ನಪ್ಪಿದ್ದು, ನಟ ರಜನಿಕಾಂತ್ (Rajinikanth) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಜನಿಕಾಂತ್, ಕರೂರಿನಲ್ಲಿ ನಡೆದ ಘಟನೆಯಲ್ಲಿ ಅಮಾಯಕರ ಜೀವಹಾನಿಯ ಸುದ್ದಿ ಹೃದಯವನ್ನು ಕಲಕಿದೆ. ಅಪಾರ ದುಃಖವನ್ನುಂಟು ಮಾಡಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ತಮಿಳು ನಟ ವಿಜಯ್ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
கரூரில் நிகழ்ந்திருக்கும் அப்பாவி மக்களின் உயிரிழப்புச் செய்தி நெஞ்சை உலுக்கி மிகவும் வேதனையளிக்கிறது.
உயிரிழந்தோரின் குடும்பத்தினருக்கு என் ஆழ்ந்த அனுதாபங்கள். காயமடைந்தோருக்கு ஆறுதல்கள்.#Karur #Stampede
— Rajinikanth (@rajinikanth) September 27, 2025
ಶನಿವಾರ ಸಂಜೆ ಕರೂರಿನಲ್ಲಿ ಟಿವಿಕೆ ನಾಯಕ ವಿಜಯ್ ರ‍್ಯಾಲಿ ವೇಳೆ ಈ ದುರಂತ ಸಂಭವಿಸಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆಯ ನಂತರ 50 ಕ್ಕೂ ಹೆಚ್ಚು ಜನರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ದುರಂತದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕಾಲ್ತುಳಿತ ಅವಘಡ ಕಳವಳಕಾರಿ ಎಂದಿದ್ದಾರೆ. ಸಂತ್ರಸ್ತರಿಗೆ ತಕ್ಷಣ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?