ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಂ ವೇದ’ ಮ್ಯೂಸಿಕ್ ಡೈರೆಕ್ಟರ್

Public TV
1 Min Read

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ ‘SCFC01’ ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ‌. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್ ಸಿ.ಎಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ವಿಕ್ರಂ ವೇದ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಟ್ಯೂನ್ ಹಾಕಿರುವ ಸ್ಯಾಮ್, ಇದೀಗ ಕರುನಾಡ ಚಕ್ರವರ್ತಿ ಶಿವಣ್ಣ ಬಣ್ಣ ಹಚ್ಚಲಿರುವ ಅಪ್ ಕಮ್ಮಿಂಗ್ ಪ್ರಾಜೆಕ್ಟ್ ಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.  ಸುಧೀರ್ ಚಂದ್ರ ಪದ್ರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್ ಅದ್ವೈತ್ ನಿರ್ದೇಶನದಲ್ಲಿ ಮಾಡಲಿದ್ದಾರೆ. ಇದನ್ನೂ ಓದಿ:ಕೊನೆಗೂ ಮಗುವಿನ ತಂದೆ ಯಾರೆಂದು ಗುಟ್ಟು ಬಿಟ್ಟು ಕೊಟ್ಟ ಇಲಿಯಾನಾ

ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಪ್ರಾಜೆಕ್ಟ್ ಮೂಲಕ ಸ್ಯಾಮ್ ಸಿ ಎಸ್ ಪ್ಯಾನ್ ಇಂಡಿಯಾ ಮ್ಯೂಸಿಕಲ್ ಐಕಾನ್ ಆಗಲಿದ್ದಾರೆ.

 

ಈ ಸಿನಿಮಾದ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಮುಂದಿನ ದಿನಗಳಲ್ಲಿ ತಾರಾಗಣ ಮತ್ತು ಇತರ ವಿಷಯಗಳನ್ನು ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ. ಈ ಮೂಲಕ ಕನ್ನಡಕ್ಕೆ ಮತ್ತೋರ್ವ ಪ್ರತಿಭಾವಂತ ಸಂಗೀತ ನಿರ್ದೇಶಕರನ್ನು ಚಿತ್ರತಂಡ ಪರಿಚಯಿಸುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಪ್ ಡೇಟ್ ನೀಡುವುದಾಗಿಯೂ ತಿಳಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್