ರೈತನಿಗೆ ಪ್ರಾಣ ಬೆದರಿಕೆ ಹಾಕಿದ ಗ್ರಾಮದ ಲೆಕ್ಕಾಧಿಕಾರಿ

Public TV
1 Min Read

ಕೋಲಾರ: ಗ್ರಾಮದ ಲೆಕ್ಕಾಧಿಕಾರಿಯೊಬ್ಬನು ರೈತರೊಬ್ಬರಿಗೆ ಪ್ರಾಣ ಬೆದರಿಕೆ ಹಾಕಿದ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಮಾರಿಕುಪ್ಪ ಗ್ರಾಮದಲ್ಲಿ ನಡೆದಿದೆ.

ಬೆಳೆ ಪರಿಹಾರಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ರೈತ ವೆಂಕಟೇಶ್ ಅವರು ಶಾಸಕಿ ರೂಕಲಾ ಶಶಿಧರ್ ಅವರ ಗಮನಕ್ಕೆ ತಂದಿದ್ದರು. ಈ ವೇಳೆ ಶಾಸಕಿ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದ್ದರು. ಇದರಿಂದ ಕೆರಳಿದ ಗ್ರಾಮದ ಲೆಕ್ಕಾಧಿಕಾರಿ ರಮೇಶ್ ಕುಮಾರ್ ರೈತನಿಗೆ ಪ್ರಾಣ ಬೆದರಿಕೆ ಹಾಕಿರುವ ಆರೋಪ ಬಂದಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್

ರಮೇಶ್ ಕುಮಾರ್‍ನು ರೈತನ ಸ್ನೇಹಿತರೊಬ್ಬರಿಗೆ ದೂರವಾಣಿ ಮೂಲಕ ಪ್ರಾಣ ಬೆದರಿಕೆ ಒಡ್ಡಿದ್ದು, ಕಾರಿನಲ್ಲಿ ಕೈ ಕಾಲು ಕಟ್ಟಿ ಹಾಕಿ ಘಾಟ್ ಸೆಕ್ಷನ್ ನಲ್ಲಿ ಬಿಸಾಕುತ್ತೇನೆ. ನಿನ್ನ ಒಂದು ಮೂಳೇನೂ ಸಿಗದೆ ಮುಚ್ಚಾಕುತ್ತೇನೆ ಎಂದಿದ್ದಾನೆ. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ

BRIBE

ಈ ಬೆದರಿಕೆ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಮದ ಲೆಕ್ಕಾಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *