ಚಿಕ್ಕಬಳ್ಳಾಪುರ: ಗ್ರಾಮದಲ್ಲಿ ಅನುಮಾನಸ್ಪದವಾಗಿ ಅಡ್ಡಾಡುತ್ತಿದ್ದ ಮೂವರು ಯುವಕರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹಳೇಪೇರೇಸಂದ್ರ ಗ್ರಾಮದಲ್ಲಿ ನಡೆದಿದೆ.
ನಾಲ್ವರು ಯುವಕರು ಗ್ರಾಮದ ಸುತ್ತಮುತ್ತ ಅನುಮಾನಸ್ಪದವಾಗಿ ಓಡಾಡುತ್ತಿದ್ದನ್ನು ಕಂಡ ಗ್ರಾಮಸ್ಥರು ಯುವಕರನ್ನು ಪ್ರಶ್ನೆ ಮಾಡಿದ್ದಾರೆ. ಆದರೆ ಗ್ರಾಮಸ್ಥರ ಪ್ರಶ್ನೆಗಳಿಗೆ ಸಮಪರ್ಕವಾಗಿ ಉತ್ತರಿಸದ ಯುವಕರ ಮೇಲೆ ಮತ್ತಷ್ಟು ಅನುಮಾನಗೊಂಡ ಗ್ರಾಮಸ್ಥರು ನಾಲ್ವರು ಯುವಕರಲ್ಲಿ ಮೂವರನ್ನು ಹಿಡಿದುಕೊಂಡಿದ್ದಾರೆ.
ನಾಲ್ವರಲ್ಲಿ ಓರ್ವ ಪರಾರಿಯಾಗಿದ್ದು, ಉಳಿದವರನ್ನು ಥಳಿಸಿ ಪೇರೇಸಂದ್ರ ಹೊರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ತಾವು ಖಾಸಗಿ ಎಂಟರ್ ಪ್ರೈಸರ್ಸ್ ಫೈನಾನ್ಸ್ ವ್ಯವಹಾರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಇದನ್ನು ನಂಬಲು ಒಪ್ಪದ ಗ್ರಾಮಸ್ಥರು ಮೂವರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.