ಕೂದಲು ಕತ್ತರಿಸಿ, ಮಹಿಳೆ-ವ್ಯಕ್ತಿಯನ್ನು ಹಗ್ಗದಲ್ಲಿ ಕಟ್ಟಿ ಮೆರವಣಿಗೆ ಮಾಡಿದ ಗ್ರಾಮಸ್ಥರು – ವಿಡಿಯೋ

Public TV
1 Min Read

ಭುವನೇಶ್ವರ: ಅನೈತಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಮಹಿಳೆ ಮತ್ತು ವ್ಯಕ್ತಿಯೊಬ್ಬನನ್ನ ಗ್ರಾಮಸ್ಥರು ಥಳಿಸಿರುವ ಘಟನೆ ಒಡಿಶಾದ ಬುಡಕಟ್ಟು ಜಿಲ್ಲೆಯ ನಬರಾಂಗ್ಪುರ್ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿ ಪಾಪದಹಂಡಿ ಪ್ರದೇಶದವನು ಎಂದು ತಿಳಿದು ಬಂದಿದೆ. ಈತ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದನು. ಮಹಿಳೆ ಬುವಲಿಬೇಡಾ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು.

ಮಹಿಳೆ ವ್ಯಕ್ತಿಯ ಜೊತೆ ತುಂಬಾ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ. ಆದರೆ ಶುಕ್ರವಾರ ರಾತ್ರಿ ಇಬ್ಬರು ಒಟ್ಟಿಗೆ ಇದ್ದಾಗ ರೆಡ್ ಹ್ಯಾಂಡ್ ಆಗಿ ತನ್ನ ಪತಿ ಮತ್ತು ಕೆಲವು ಸ್ಥಳೀಯರ ಕೈ ಸಿಕ್ಕಿ ಬಿದ್ದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಇಬ್ಬರನ್ನು ಒಂದೇ ಹಗ್ಗದಲ್ಲಿ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಅವರ ಕೂದಲನ್ನು ಕತ್ತರಿಸಿ ಗ್ರಾಮದ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ಮಹಿಳೆ ವೇಶ್ಯಾವಾಟಿಕೆ ನಡೆಸುವಲ್ಲಿ ತೊಡಗಿದ್ದಾಳೆ. ಇದಕ್ಕೆ ಆ ವ್ಯಕ್ತಿಯೂ ಕೂಡ ಸಹಾಯ ಮಾಡುತ್ತಿದ್ದನು ಎಂದು ಗ್ರಾಮಸ್ಥರು ಆರೋಪಿದ್ದು, ಮಹಿಳೆಯನ್ನು ಅಂಗನವಾಡಿ ಕೆಲಸದಿಂದ ತೆಗೆಯುವಂತೆ ಒತ್ತಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡು ಉಮರ್ ಕೋಟೆ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ರಕ್ಷಿಸಿ ಆಕೆಯ ಪತಿ ಮತ್ತು ಇದಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಿದ್ದಾರೆ. ಮಹಿಳೆ ಮತ್ತು ವ್ಯಕ್ತಿಗೆ ಹೊಡೆಯುತ್ತಿದ್ದಾಗ ಅಲ್ಲಿದ್ದ ಜನರು ಅವರಿಗೆ ಸಹಾಯ ಮಾಡದೆ ತಮ್ಮ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.

ನಮಗೆ ಅಪರಿಚಿತ ವ್ಯಕ್ತಿಯೊಬ್ಬರು ಫೋನ್ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದರು. ನಂತರ ನಾವು ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಹೊಡೆತದಿಂದ ವ್ಯಕ್ತಿ ಮತ್ತು ಮಹಿಳೆಯನ್ನು ರಕ್ಷಿಸಿದ್ದೇವೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮಾಡುತ್ತಿದ್ದೇವೆ. ಈ ಘಟನೆಯು ಮಹಿಳೆಗೆ ಸಂಬಂಧಿಸಿರುವುದರಿಂದ ಪ್ರಾಥಮಿಕ ತನಿಖೆಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಬೈರೇಂದ್ರ ಸೇನಪತಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *