ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

Public TV
2 Min Read

ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್‌ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಕೇಸ್‌ನಲ್ಲಿ 12 ಜನರನ್ನ ಅರೆಸ್ಟ್ ಮಾಡಿರುವ ನಗರ ಪೊಲೀಸರು (Bengaluru City Police) ವಿಚಾರಣೆಗೊಳಪಡಿಸಿದ್ದಾರೆ. ಇದನ್ನ ಹೊರತುಪಡಿಸಿದ್ರೆ ಬಹುತೇಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಖಾಸಗಿ ಸಾರಿಗೆಗಳು ತಮ್ಮ ಬೇಡಿಕೆಯನ್ನ ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ.

ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

ಪ್ರಮುಖ ಬೇಡಿಕೆ ಏನಿತ್ತು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್