ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಪೊಲೀಸ್ ದೌರ್ಜನ್ಯದ ಪರಾಕಾಷ್ಠೆ. ಗೃಹ ಸಚಿವ ಪರಮೇಶ್ವರ್ (G Parameshwar) ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಅವರು, ಇದೊಂದು ಅಮಾನವೀಯ ಘಟನೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ದ್ರೌಪದಿ ವಸ್ತ್ರಾಪಹರಣ ಆದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಅರವಿಂದ್ ಬೆಲ್ಲದ್
ಎಕ್ಸ್‌ನಲ್ಲಿ ಏನಿದೆ?
ಹುಬ್ಬಳ್ಳಿಯಲ್ಲಿ ಮಾನವೀಯತೆ ಮಟಾಷ್, ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸ್ ದೌರ್ಜನ್ಯದ ಪರಾಕಾಷ್ಠೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಅವರ ಮೇಲೆ ನಡೆದಿದೆ ಎನ್ನಲಾದ ಅಮಾನವೀಯ ಕೃತ್ಯವು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದು. ಇದನ್ನೂ ಓದಿ: ಇನ್ಸ್ಟಾದಲ್ಲಿ ಯುವತಿಗೆ ಮೆಸೇಜ್ – ಇದು ಕಾಂಗ್ರೆಸ್ ಐಟಿ ಟೀಂ ಕೆಲಸ ಎಂದ ಬಿಜೆಪಿ ಶಾಸಕ
ಕಾಂಗ್ರೆಸ್ ಪಾಲಿಕೆ ಸದಸ್ಯೆಯೊಬ್ಬರ ದೂರಿನ ಹಿನ್ನೆಲೆಯಲ್ಲಿ ಸುಜಾತ ಅವರನ್ನು ವಶಕ್ಕೆ ಪಡೆದ ಪೊಲೀಸರು, ಅವರು ಒಬ್ಬ ಮಹಿಳೆ ಎಂಬ ಕನಿಷ್ಠ ಗೌರವವನ್ನೂ ನೀಡದೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವುದು ಆಘಾತಕಾರಿಯಾಗಿದೆ. ಕಾನೂನು ಪಾಲಿಸಬೇಕಾದ ಪೊಲೀಸರೇ ಈ ಮಟ್ಟದ ದೌರ್ಜನ್ಯಕ್ಕೆ ಇಳಿದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದನ್ನೂ ಓದಿ: ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಅಶೋಕ್
ಕೇವಲ ರಾಜಕೀಯ ಪ್ರೇರಿತ ದೂರಿನ ಆಧಾರದ ಮೇಲೆ ಒಬ್ಬ ಮಹಿಳಾ ಕಾರ್ಯಕರ್ತೆಯ ವಿರುದ್ಧ ಇಂತಹ ಭೀಕರ ಕ್ರಮ ಕೈಗೊಂಡಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಹತ್ಯೆಯಾಗಿದೆ. ಆಡಳಿತ ಪಕ್ಷದ ಸದಸ್ಯರ ಅಣತಿಯಂತೆ ಪೊಲೀಸರು ಕೆಲಸ ಮಾಡುತ್ತಿರುವುದು ಮತ್ತು ಮಹಿಳೆಯರ ಆತ್ಮಗೌರವಕ್ಕೆ ಧಕ್ಕೆ ತರುತ್ತಿರುವುದು ಖಂಡನೀಯ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು – ಸಿ.ಟಿ.ರವಿ
ರಾಜ್ಯದ ಇತಿಹಾಸದಲ್ಲಿಯೇ ಇಂತಹ ನಾಚಿಕೆಗೇಡಿನ ಸರ್ಕಾರ ಬಂದಿರಲಿಲ್ಲ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರ ಬಲದಿಂದ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಮಹಿಳೆಯರನ್ನು ಗುರಿ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಇದನ್ನೂ ಓದಿ: ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್ ಇದೆ: ಹು-ಧಾ ಆಯುಕ್ತ ಶಶಿಕುಮಾರ್
ಗೃಹ ಸಚಿವರೇ, ನಿಮ್ಮ ಇಲಾಖೆಯ ಮೂಗಿನ ನೇರಕ್ಕೇ ಇಂತಹ ಅಮಾನುಷ ಘಟನೆಗಳು ನಡೆಯುತ್ತಿದ್ದರೂ ನೀವು ಮೌನವಾಗಿರುವುದು ಏಕೆ? ಮಹಿಳೆಯರಿಗೆ ರಕ್ಷಣೆ ನೀಡಲಾಗದ ನೀವು ಅಧಿಕಾರದಲ್ಲಿ ಮುಂದುವರಿಯುವ ಎಲ್ಲಾ ನೈತಿಕತೆಯನ್ನು ಕಳೆದುಕೊಂಡಿದ್ದೀರಿ. ಇಂತಹ ದೌರ್ಜನ್ಯ ಎಸಗಿದ ಅಧಿಕಾರಿಗಳ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕು ಮತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

