ವೀರ್ ದಾಸ್‍ಗೆ ಪ್ರದರ್ಶನ ನೀಡಲು ಬಿಡುವುದಿಲ್ಲ: ನರೋತ್ತಮ್ ಮಿಶ್ರಾ

Public TV
2 Min Read

ಮುಂಬೈ: ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ ಎಂದು ಹೇಳುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ಹಾಸ್ಯನಟ ವೀರ್ ದಾಸ್ ಅವರಿಗೆ ರಾಜ್ಯದಲ್ಲಿ ಯಾವುದೇ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದಿಲ್ಲ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

vir das

ಅಮೇರಿಕಾದಲ್ಲಿ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ್ದ ವೀರ್ ದಾಸ್ ಅವರು ಆ ವೀಡಿಯೋವನ್ನು ತಮ್ಮ ಯೂಟ್ಯೂಬ್‍ನಲ್ಲಿ ಹಂಚಿಕೊಂಡಿದ್ದರು. ಮಹಿಳೆಯನ್ನು ಗೌರವಿಸುವ, ರಾತ್ರಿಯಲ್ಲಿ ಮಹಿಳೆ ಮೇಲೆ ಅತ್ತಾಚಾರ ಮಾಡುವ ದೇಶದಿಂದ ನಾನು ಬಂದಿದ್ದೇನೆ. ಅಲ್ಲಿ ಮಾಸ್ಕ್ ಹಾಕಿಕೊಂಡು ಮಕ್ಕಳು ಕೈ ಮುಗುಯುವಾಗ, ನಾಯಕರು ಮಾಸ್ಕ್ ಇಲ್ಲದೇ ಅಪ್ಪಿಕೊಳ್ಳುತ್ತಾರೆ. ಅತಿ ದೊಡ್ಡ ಜನಸಂಖ್ಯೆ ಇರುವ ರಾಷ್ಟ್ರದಿಂದ ಬಂದಿದ್ದೇನೆ. 75 ವರ್ಷದ ಮುದುಕರಿಂದ 150 ವರ್ಷದ ಹಳೆಯದಾದ ಐಡಿಯಾಗಳನ್ನು ಕೇಳಲಾಗುತ್ತದೆ ಎಂದು ವೀರ್ ದಾಸ್ ವೀಡಿಯೋದಲ್ಲಿ ಹೇಳಿದ್ದರು. ಇದನ್ನೂ ಓದಿ: ಅವಳಿ ಮಕ್ಕಳಿಗೆ ಪೋಷಕರಾದ ನಟಿ ಪ್ರೀತಿ ಜಿಂಟಾ ದಂಪತಿ

ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ವೀರ್ ದಾಸ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಈ ಬಗ್ಗೆ ವೀರ್ ದಾಸ್ ಅವರು, ಭಾರತ ದೇಶವನ್ನು ಅವಮಾನಗೊಳಿಸಬೇಕೆಂಬ ಉದ್ದೇಶವನ್ನು ನಾನು ಹೊಂದಿಲ್ಲ. ವಿಭಿನ್ನವಾದಂತಹ ಕೆಲಸಗಳನ್ನು ಮಾಡುವ ಎರಡು ಪ್ರತ್ಯೇಕ ಭಾರತದ ದ್ವಂದ್ವತೆಯನ್ನು ಅಲ್ಲಿ ವಿವರಿಸಲಾಗಿದೆ. ಯಾವುದೇ ದೇಶದಲ್ಲಿಯೂ ಬೆಳಕು ಮತ್ತು ಕತ್ತಲೆ, ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಅದೇನೂ ಗುಟ್ಟಲ್ಲ. ನಾವು ಶ್ರೇಷ್ಠರು ಎಂಬುದನ್ನು ಎಂದಿಗೂ ಮರೆಯಬಾರದು ಎಂದು ಮನವಿ ಮಾಡಿದ್ದರು. ನಮ್ಮನ್ನು ಶ್ರೇಷ್ಠರು ಎಂದು ಹೇಳುವುದರ ಮೇಲೆ ಕೇಂದ್ರೀಕರಿಸುವುದನ್ನು ಎಂದಿಗೂ ನಿಲ್ಲಿಸಬಾರದು. ನಾವೆಲ್ಲರೂ ಪ್ರೀತಿಸುವ, ನಂಬುವ ಮತ್ತು ಹೆಮ್ಮೆಪಡುವ ದೇಶಕ್ಕೆ ದೇಶಭಕ್ತಿಯ ಚಪ್ಪಾಳೆ ಹೊಡೆಯುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಟಿಎಂಸಿ ಸದಸ್ಯರಾದ ಮಹುವಾ ಮೊಯಿತ್ರಾ ಮತ್ತು ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್ ಮತ್ತು ಶಶಿ ತರೂರ್ ಅವರು ಬೆಂಬಲ ನೀಡಿದ್ದರು. ಇದನ್ನೂ ಓದಿ:  ಫ್ಯಾಮಿಲಿ ಜೊತೆಗೆ ಜಾಲಿ ಮೂಡ್‍ನಲ್ಲಿ ಶ್ವೇತಾ ಚೆಂಗಪ್ಪ

ಸದ್ಯ ಈ ಕುರಿತಂತೆ ನರೋತ್ತಮ್ ಮಿಶ್ರಾ ಅವರು, “ಅಂತಹ ಹಾಸ್ಯಗಾರರಿಗೆ ರಾಜ್ಯದಲ್ಲಿ ಹಾಸ್ಯ ಪ್ರದರ್ಶನ ನೀಡಲು ನಾವು ಅನುಮತಿ ನೀಡುವುದಿಲ್ಲ. ಅವರು ಕ್ಷಮೆಯಾಚಿಸಿದರೆ, ನಾವು ಅದರ ಬಗ್ಗೆ ಯೋಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದೇ ಭಾರತವನ್ನು “ಅವಮಾನ” ಮಾಡಲು ಪ್ರಯತ್ನಿಸುವ ಕೆಲವು ಹಾಸ್ಯಗಾರರಿದ್ದಾರೆ ಮತ್ತು ಅವರಿಗೆ ಕಪಿಲ್ ಸಿಬಲ್ ಮತ್ತು ಇತರ ಕಾಂಗ್ರೆಸ್ ಜನರಂತಹ ಕೆಲವು ಬೆಂಬಲಿಗರಿದ್ದಾರೆ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *