Chandrayaan-3: ವಿಮಾನದ ಕಿಟಕಿಯಿಂದ ಸೆರೆಯಾದ ಅದ್ಭುತ ವೀಡಿಯೋ ವೈರಲ್

Public TV
1 Min Read

ಚೆನ್ನೈ: ಚಂದ್ರಯಾನ-3 (Chandrayaan-3) ಉಡಾವಣೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿತ್ತು. ಅಂತೆಯೇ ಈ ಉಪಗ್ರಹ ಹೊತ್ತ ಬಾಹ್ಯಾಕಾಶ ನೌಕೆ ಚಂದ್ರನತ್ತ ಸಾಗುತ್ತಿರುವ ಅದ್ಭುತ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ.

ಹೌದು. ಚಂದ್ರಯಾನ-3 ಗಗನಕ್ಕೇರುತ್ತಿದ್ದಂತೆಯೇ ಚೆನ್ನೈ- ಢಾಕಾ (Chennai – Dhaka Plane) ಮಾರ್ಗದಲ್ಲಿ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ಕಿಟಕಿ ಬದಿಯ ಸಿಟ್‍ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‍ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಆಗ ಚಂದ್ರಯಾನ-3 ರಾಕೆಟ್ ಅತ್ಯಂತ ವೇಗವಾಗಿ ಹೋದ ದೃಶ್ಯ ಕೂಡ ಸೆರೆಯಾಯಿತು. ಇದನ್ನೂ ಓದಿ: Chandrayaan-3 ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ: ಇಸ್ರೋ

ಈ ವೀಡಿಯೋವನ್ನು ಇಸ್ರೋ ಮೆಟೀರಿಯಲ್ಸ್ ನಿವೃತ್ತ ನಿರ್ದೇಶಕ ಮತ್ತು ರಾಕೆಟ್ ತಯಾರಿಕಾ ತಜ್ಞ ಡಾ ಪಿ.ವಿ ವೆಂಕಟಕೃಷ್ಣನ್ (Dr P V Venkitakrishnan) ಅವರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ವೀಡಿಯೋಗೆ “ವಿಮಾನದಿಂದ ಚಂದ್ರಯಾನ 3 ಉಡಾವಣೆ” ಎಂಬ ಶೀರ್ಷಿಕೆ ನೀಡಿದ್ದಾರೆ. ಚೆನ್ನೈನಿಂದ ಢಾಕಾಗೆ ಟೇಕಾಫ್ ಆದ ಸ್ವಲ್ಪ ಸಮಯದ ನಂತರ, ಪೈಲಟ್ ಈ ಐತಿಹಾಸಿಕ ಘಟನೆಯನ್ನು ವೀಕ್ಷಿಸಿ ಎಂದು ಘೋಷಿಸಿರುವುದಾಗಿ ಅವರು ಬರೆದುಕೊಂಡಿದ್ದಾರೆ.

ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಅಪ್ಲೋಡ್ ಮಾಡಿದಾಗಿನಿಂದ ಲಕ್ಷಗಟ್ಟಲೆ ಮಂದಿ ವೀಕ್ಷಿಸಿದ್ದಾರೆ. ಅಲ್ಲದೆ ಲೆಕ್ಕವಿಲ್ಲದಷ್ಟು ಲೈಕ್‍ಗಳನ್ನು ಪಡೆದುಕೊಂಡಿದೆ. ಪ್ರಯಾಣಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಹಿದಿರುವ ದೃಶ್ಯ ಕಂಡು ಜಾಲತಾಣಿಗರು ಮೂಕವಿಸ್ಮಿತರಾಗಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್