ಕೊಹ್ಲಿ ಮನೆಗೆ ಜ್ಯೂನಿಯರ್ ವಿರಾಟ್ ಆಗಮನ

Public TV
1 Min Read

ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರ ಮನೆಗೆ ಮತ್ತೊಬ್ಬ ಅತಿಥಿಯ ಆಗಮನವಾಗಿದೆ. ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿಗೆ (Boy Baby)  ಜನ್ಮ ನೀಡಿದ್ದಾರೆ.

ಅನುಷ್ಕಾ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಅಭಿಮಾನಿಗಳ ಜೊತೆ ಸಿಹಿಸುದ್ದಿ ಹಂಚಿಕೊಂಡಿದ್ದಾರೆ. ಫೆ.15 ರಂದು ವಿರುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಮಂಗಳವಾರ (ಫೆ.20) ಹಂಚಿಕೊಂಡಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ.  ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ  ಎಂದು ನಟಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿದ್ದಾರೆ. ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

 

View this post on Instagram

 

A post shared by AnushkaSharma1588 (@anushkasharma)

ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್‌-ಭಾರತ ಟೆಸ್ಟ್‌ ಸರಣಿ ನಡೆಯುತ್ತಿದೆ. ಐದು ಸರಣಿಯಲ್ಲಿ ಈಗಾಗಲೇ ಮೂರು ಪಂದ್ಯಗಳು ನಡೆದಿವೆ. ಭಾರತ 3-2 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ ಬಾಕಿಯಿದೆ. ಟೆಸ್ಟ್‌ ಸರಣಿಗೆ ವಿರಾಟ್‌ ಕೊಹ್ಲಿ ಅಲಭ್ಯರಾಗಿದ್ದಾರೆ.

ವೈಯಕ್ತಿಕ ಕಾರಣ ನೀಡಿ ವಿರಾಟ್‌ ಕೊಹ್ಲಿ ಟೆಸ್ಟ್‌ ಸರಣಿಯಿಂದ ಹೊರಗಿದ್ದಾರೆ. ಅನುಷ್ಕಾ ಶರ್ಮಾ ಈಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಟೆಸ್ಟ್‌ ಸರಣಿಯಿಂದ ಹೊರಗಿದ್ದಾರೆ.

Share This Article