IPLನಲ್ಲಿ 7 ಸಾವಿರ ರನ್‌ ಸಿಡಿಸಿ ದಾಖಲೆ ಬರೆದ ರನ್‌ ಮಿಷಿನ್‌ ಕೊಹ್ಲಿ

Public TV
2 Min Read

ನವದೆಹಲಿ: 2008ರಲ್ಲಿ ಪ್ರಾರಂಭಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಕ್ರಿಕೆಟ್ ಜಾತ್ರೆ, ತನ್ನ ಯಶಸ್ವಿ 16ನೇ ಆವೃತ್ತಿ ಮುಗಿಸಲು ಕೆಲವೇ ದಿನಗಳು ಬಾಕಿಯಿದೆ. ಈ ನಡುವೆ ಆರ್‌ಸಿಬಿ (RCB) ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲಿ ಆರಂಭದಿಂದ ಒಂದೇ ತಂಡ ಪ್ರತಿನಿಧಿಸಿರುವ ಏಕೈಕ ಆಟಗಾರಗನಾಗಿದ್ದು, 7 ಸಾವಿರ ರನ್‌ ಪೂರೈಸಿದ ಸಾಧನೆ ಮಾಡಿದ್ದಾರೆ.

ಶನಿವಾರ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯಶಸ್ವಿಯಾಗಿ ಅರ್ಧಶತಕ ಪೂರೈಸಿದ ಕೊಹ್ಲಿ ಐಪಿಎಲ್‌ ಕ್ರಿಕೆಟ್‌ ಇತಿಹಾಸದಲ್ಲಿ 7 ಸಾವಿರ ರನ್‌ ಪೂರೈಸಿದ ಮೊದಲ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಕೊಹ್ಲಿ ತಮ್ಮ 233ನೇ ಪಂದ್ಯದಲ್ಲಿ 7 ಸಾವಿರ ರನ್‌ ಪೂರೈಸಿದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮಕಾಡೆ ಮಲಗಿದ ಮುಂಬೈ, ಚೆನ್ನೈಗೆ 6 ವಿಕೆಟ್‌ಗಳ ಜಯ – CSK ಪ್ಲೆ ಆಫ್‌ಗೆ ಇನ್ನೆರಡೇ ಹೆಜ್ಜೆ ಬಾಕಿ

ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 213 ಪಂದ್ಯಗಳಲ್ಲಿ 6,536 ರನ್ ಗಳಿಸುವ ಮೂಲಕ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ 171 ಪಂದ್ಯಗಳಿಂದ 6,189 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 237 ಪಂದ್ಯಗಳಲ್ಲಿ 6,063 ರನ್‌ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಗುಜರಾತ್‌ ಟೈಟಾನ್ಸ್‌ಗೆ 9 ವಿಕೆಟ್‌ಗಳ ಭರ್ಜರಿ ಜಯ – ಪಾಂಡ್ಯ ಪಡೆ ಬಹುತೇಕ ಪ್ಲೇ ಆಫ್‌ಗೆ; ಈ ಸಲ ಕಪ್‌ ಯಾರದ್ದು?

2016ರ ಆವೃತ್ತಿಯ ಐಪಿಎಲ್‌ನಲ್ಲಿ 16 ಪಂದ್ಯಗಳಲ್ಲಿ 4 ಶತಕಗಳೊಂದಿಗೆ ಕೊಹ್ಲಿ 973 ರನ್‌ ಗಳಿಸಿ‌, ಒಂದೇ ಋತುವಿನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಸಾಧನೆ ಮಾಡಿದ್ದರು. ಇದೀಗ ಐಪಿಎಲ್‌ನಲ್ಲಿ ಈವರೆಗೆ ಯಾರೂ ಮುರಿಯದ ದಾಖಲೆ ಮಾಡಿದ್ದಾರೆ.

Share This Article