ಜೈಸ್ವಾಲ್ ಕ್ಯಾಚ್ ಹಿಡಿದು ಅನುಷ್ಕಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಕೊಹ್ಲಿ

Public TV
1 Min Read

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ರೋಚಕತೆಯಿಂದ ಕೂಡಿದ್ದ ಆರ್‌ಸಿಬಿ (RCB) ಹಾಗೂ ರಾಜಸ್ಥಾನ್ ರಾಯಲ್ಸ್ (Rajasthan Royals) ನಡುವಿನ IPL ಪಂದ್ಯದ ವೇಳೆ ಕೊಹ್ಲಿಯ (Virat Kohli) ಫ್ಲೈಯಿಂಗ್ ಕಿಸ್‍ಗೆ ಅನುಷ್ಕಾ ಶರ್ಮಾ (Anushka Sharma) ರೋಮಾಂಚನಗೊಂಡ ದೃಶ್ಯ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಭರ್ಜರಿ ಫಿಫ್ಟಿ; ಬೆಂಗ್ಳೂರಿನಲ್ಲಿ RCB ʻಹಸಿರು ಕ್ರಾಂತಿʼ- ರಾಯಲ್ಸ್‌ ವಿರುದ್ಧ 7 ರನ್‌ ರೋಚಕ ಜಯ

ವಿರಾಟ್ ಕೊಹ್ಲಿ ತಮ್ಮ ಬ್ಯಾಟ್‍ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ಆದರೆ ಪಂದ್ಯದ ಸಮಯದಲ್ಲಿ ಪತ್ನಿ ಅನುಷ್ಕಾ ಶರ್ಮಾ ಅವರೆಡೆಗೆ ಹಾರಿಸಿದ ಪ್ರಣಯ ಸೂಚಕ ಸಿಹಿಮುತ್ತು ಕೊಹ್ಲಿ ಪ್ರೇಮಿಗಳ ಹೃದಯಗಳನ್ನು ಗೆದ್ದಿತು. ಯಶಸ್ವಿ ಜೈಸ್ವಾಲ್ (Jaiswal) ಅವರು ಬ್ಯಾಟ್ ಬೀಸಿದಾಗ ಕೊಹ್ಲಿಯ ಕೈಗೆ ನೇರವಾಗಿ ಕ್ಯಾಚ್ ಹೋಯಿತು. ಅದೇ ಸಂಭ್ರಮದಲ್ಲಿ ಕೊಹ್ಲಿ, ಅನುಷ್ಕಾ ಅವರೆಡೆಗೆ ಆನ್‍ಫೀಲ್ಡ್‌ನಿಂದಲೇ ಸಿಹಿ ಮುತ್ತು ರವಾನಿಸಿದರು.

ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 7 ರನ್‍ಗಳ ರೋಚಕ ಗೆಲುವು ಸಾಧಿಸಲು ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್‌ (Maxwell) ಇಬ್ಬರಿಂದ ದಾಖಲಾದ ಶತಕ ಪ್ರಮುಖ ಪಾತ್ರವಹಿಸಿತು.

ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತ್ತು. 190 ರನ್‍ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: BCCIಗೆ ಲಕ್ಷ ಲಕ್ಷ ನಷ್ಟ – ಅರ್ಷ್‌ದೀಪ್‌ ಮುರಿದ 2 ಸ್ಟಂಪ್ಸ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ..

Share This Article