ವಿಶ್ರಾಂತಿ ಬೇಡ – ವೆಸ್ಟ್ ಇಂಡೀಸ್ ಸರಣಿಗೆ ಕೊಹ್ಲಿ ಸಿದ್ಧ

By
2 Min Read

– ಶೀಘ್ರವೇ ತಂಡ ಪ್ರಕಟಿಸಲಿರುವ ಬಿಸಿಸಿಐ

ಮುಂಬೈ: ಮುಂದಿನ ತಿಂಗಳಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ನಾಯಕ ಕೊಹ್ಲಿ ಸಿದ್ಧತೆ ನಡೆಸಿದ್ದು, ಅದರಲ್ಲೂ ಹಿರಿಯ ಆಟಗಾರರು ಸಂಪೂರ್ಣ ಟೂರ್ನಿಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಹಿಂದೆ ಬಿಸಿಸಿಐ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಚಿಂತನೆ ನಡೆಸಿತ್ತು.

ವಿಶ್ವಕಪ್ ಟೂರ್ನಿಯ ಬಳಿಕ ಹಾರ್ದಿಕ್ ಪಾಂಡ್ಯ, ಬುಮ್ರಾ, ಧೋನಿ, ಕೊಹ್ಲಿ ಸೇರಿದಂತೆ ಹಲವು ಆಟಗಾರರಿಗೆ ವಿಶ್ರಾಂತಿ ನೀಡುವ ಕುರಿತು ಬಿಸಿಸಿಐ ತೀರ್ಮಾನಿಸಿತ್ತು. ಆದರೆ ಸದ್ಯ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಎಲ್ಲರು 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಬಿಸಿಸಿಐ ಏಪ್ರಿಲ್ 19 ರಂದು ತಂಡವನ್ನು ಪ್ರಕಟಿಸಿರುವ ಸಾಧ್ಯತೆ ಇದ್ದು, ಬುಮ್ರಾ 2019ರ ಐಪಿಎಲ್ ನ ಎಲ್ಲಾ 10 ಪಂದ್ಯಗಳಲ್ಲಿ ಬೌಲ್ ಮಾಡಿದ್ದರು. ಆ ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಬುಮ್ರಾ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ಒತ್ತಡವನ್ನು ನಿಭಾಯಿಸಲು ವಿಶ್ರಾಂತಿಯನ್ನು ನೀಡಲಾಗುತ್ತದೆ ಎನ್ನಲಾಗಿದೆ. ಉಳಿದಂತೆ ಪಾಂಡ್ಯ ಐಪಿಎಲ್ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಆ ಬಳಿಕ ಚೇತರಿಕೆ ಕಂಡು ವಿಶ್ವಕಪ್ ಆಡಿದ್ದರು. ಆದರೆ ವಿಶ್ವಕಪ್ ಟೂರ್ನಿಯಲ್ಲಿ ಗಾಯಗೊಂಡಿರುವ ಧವನ್, ವಿಜಯ್ ಶಂಕರ್ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

ಆಗಸ್ಟ್ 3 ರಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯ ನಡೆಯಲಿದೆ. ಉಳಿದಂತೆ ಕ್ರಮವಾಗಿ ಆಗಸ್ಟ್ 4 ಮತ್ತು 6 ರಂದು ಎರಡು ಪಂದ್ಯಗಳು ನಡೆಯಲಿದೆ. ಆ ಬಳಿಕ ಆಗಸ್ಟ್ 8 ರಿಂದ ಏಕದಿನ ಸರಣಿ ಹಾಗೂ ಆಗಸ್ಟ್ 22 ರಂದು ಮೊದಲ, 30 ರಂದು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *