ಇದು ಆರ್‌ಸಿಬಿಯ ಹೊಸ ಅಧ್ಯಾಯ – ಕನ್ನಡದಲ್ಲೇ ಕೊಹ್ಲಿ ಮಾತು

Public TV
1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಆರ್‌ಸಿಬಿ ತಂಡದ ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್‌ಸಿಬಿಯ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಅವರು ಕನ್ನಡದಲ್ಲಿಯೇ ಮಾತನಾಡಿದ್ದಾರೆ.

ವೇದಿಕೆಯಲ್ಲಿ ಮಾತನಾಡುತ್ತಾ ಕೊಹ್ಲಿ ಅವರು ʼಇದು ಆರ್‌ಸಿಬಿಯ ಹೊಸ ಅಧ್ಯಾಯʼ ಎಂದು ಹೇಳಿದರು. ಈ ವೇಳೆ ಕಾರ್ಯಕ್ರದಲ್ಲಿ ನೆರೆದಿದ್ದ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆಯೊಂದಿಗೆ ಕೊಹ್ಲಿಯನ್ನು ಕೊಂಡಾಡಿದರು. ಇದನ್ನೂ ಓದಿ: RCB Unbox: ‘ಬೆಂಗಳೂರ್‌’ ಅಲ್ಲ ಇನ್ಮುಂದೆ ಹೇಳಿ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’

 

View this post on Instagram

 

A post shared by PUBLiC TV (@publictv)

 

ಇತ್ತ ನಿರೀಕ್ಷೆಯಂತೆ ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್‌ಸಿಬಿ (RCB) ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ಇನ್ಮುಂದೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಬದಲಾಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಆರ್‌ಸಿಬಿ, ‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು ನಮ್ಮ ಹೊಸ ಅಧ್ಯಾಯದ ಸಮಯ. ನಿಮಗೆ ಪ್ರಸ್ತುತಪಡಿಸಲಾಗುತ್ತಿದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿಮ್ಮ ತಂಡ, ನಿಮ್ಮ RCB!’ ಎಂದು ಬರೆದುಕೊಂಡಿದೆ.

ಇದರ ಜೊತೆಗೆ ಹೆಸರು ಬದಲಾಯಿಸಿರುವ ಲೋಗೋ ಹಾಗೂ ನೀಲಿ ಬಣ್ಣ ಹೊಸ ಜೆರ್ಸಿ ತೊಟ್ಟಿರುವ ಆರ್‌ಸಿಬಿ ತಂಡದ ಆಟಗಾರರು ಫೋಟೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. 2024 ರ ಐಪಿಎಲ್‌ಗೆ ಆರ್‌ಸಿಬಿ ಆಟಗಾರರು ಹೊಸ ಹೆಸರು ಮತ್ತು ಜೆರ್ಸಿಯೊಂದಿಗೆ ಅಖಾಡಕ್ಕೆ ಇಳಿಯಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಡಬ್ಲ್ಯೂಪಿಎಲ್‌-2024 ಟ್ರೋಫಿ ಗೆದ್ದ ಮಹಿಳಾ ಆಟಗಾರ್ತಿಯರಿಗೆ ಪುರುಷರ ತಂಡವು ಕಾರ್ಯಕ್ರಮದಲ್ಲಿ ಭವ್ಯ ಸ್ವಾಗತ ಕೋರಿತು. ಡಬ್ಲ್ಯೂಪಿಎಲ್‌ ಟ್ರೋಫಿ ಹಿಡಿದು ಮಹಿಳಾ ತಂಡದ ನಾಯಕಿ ಫೀಲ್ಡಿಗೆ ಎಂಟ್ರಿ ಕೊಡುತ್ತಾರೆ. ಅವರ ಜೊತೆ ತಂಡದ ಆಟಗಾರರು ಸಾಲಾಗಿ ಬರುತ್ತಾರೆ. ಇವರನ್ನು ಆರ್‌ಸಿಬಿ ತಂಡದ ಪುರುಷ ಆಟಗಾರರು ಸಾಲಾಗಿ ನಿಂತು ಚಪ್ಪಾಳೆ ತಟ್ಟಿ ಸ್ವಾಗತ ಕೋರುತ್ತಾರೆ. ಈ ದೃಶ್ಯದ ವೀಡಿಯೋವನ್ನು ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

Share This Article