RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

1 Min Read

ಗುವಾಹಟಿ: ಆರ್‌ಸಿಬಿ (RCB) ಹಾಗೂ ಆರ್‌ಆರ್ (RR) ನಡುವೆ ನಿನ್ನೆ (ಏ.10) ನಡೆದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನಕ್ಕೆ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂದ್ಯ ಮುಗಿದ ಬಳಿಕ ವೈಭವ್ ಸೂರ್ಯವಂಶಿಗೆ (Vaibhav Sooryavanshi) ವಿರಾಟ್ ಕೊಹ್ಲಿ ವಿಶ್ ಮಾಡುತ್ತಾ ಸನ್ನೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇದನ್ನೂ ಓದಿ: ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

ಕೊನೆಯಲ್ಲಿ ವೈಭವ್ ಸೂರ್ಯವಂಶಿ ವಿರಾಟ್ ಕೊಹ್ಲಿ ಬಳಿ ಆಟೋಗ್ರಾಫ್ ಪಡೆದುಕೊಂಡಿದ್ದು, ರಾಜಸ್ಥಾನ್ ರಾಯಲ್ಸ್ ಕ್ಯಾಪ್‌ನಲ್ಲಿ ಬರೆದು ಶುಭಾಶಯ ತಿಳಿಸಿದ್ದಾರೆ. ಪ್ರೀತಿಯ ವೈಭವ್, ಚೆನ್ನಾಗಿ ಆಡಿದ್ದೀರಿ ಎಂದು ಬರೆದಿದ್ದಾರೆ.

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 202 ರನ್‌ಗಳ ಗೆಲುವಿನ ಗುರಿ ನೀಡಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದ ರಾಜಸ್ಥಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 7 ಸಿಕ್ಸ್, 8 ಬೌಂಟರಿ ಬಾರಿಸಿ, 78 ರನ್ ಗಳಿಸಿದರು. ಈ ಮೂಲಕ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

15ರ ವರ್ಷದ ವೈಭವ್ ಬ್ಯಾಟಿಂಗ್ ಮುಂದೆ ಮಂಕಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಪರಾಭವಗೊಂಡಿತು. ಈ ಮೂಲಕ ಸೀಸನ್‌ನಲ್ಲಿ ನಿರಂತರ ನಾಲ್ಕನೇ ಜಯ ಸಾಧಿಸಿತು. ಗೆಲುವಿನೊಂದಿಗೆ ರಾಜಸ್ಥಾನ ರಾಯಲ್ಸ್ 8 ಅಂಕಗಳೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರೆದಿದೆ.ಇದನ್ನೂ ಓದಿ: RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Share This Article