ವೀಸಾ ರದ್ದು: ಬೆಂಬಲಕ್ಕೆ ನಿಂತ ಕಿಶೋರ್ ಗೆ ಥ್ಯಾಂಕ್ಸ್ ಹೇಳಿದ ಚೇತನ್

Public TV
1 Min Read

ಟ ಚೇತನ್ (Chetan Ahimsa)  ವೀಸಾ ರದ್ದು (Visa Cancellation) ಮಾಡಿರುವ ನಡೆಯನ್ನು ನಟ ಕಿಶೋರ್ (Kishore) ವಿಭಿನ್ನವಾಗಿ ಪ್ರಶ್ನಿಸಿದ್ದರು. ಇದು ಅತಿರೇಕದ ನಡೆ ಎಂದು ಅದನ್ನು ಬಣ್ಣಿಸಿದ್ದರು. ವೀಸಾ ರದ್ದು ಕುರಿತಂತೆ ಚೇತನ್ ಅವರಿಗೆ ಈವರೆಗೂ ಯಾರು ಬೆಂಬಲ ಸೂಚಿಸಿರಲಿಲ್ಲ. ಮೊದಲ ಬಾರಿಗೆ ಕಿಶೋರ್ ಈ ನಡೆಯನ್ನು ಪ್ರಶ್ನಿಸಿದ್ದರು. ಹೀಗಾಗಿ ಚೇತನ್ ಧನ್ಯವಾದಗಳನ್ನು ತಿಳಿಸಿದ್ದಾರೆ. ತಮ್ಮ ಬೆಂಬಲಕ್ಕೆ ನಿಂತಿದ್ದನ್ನು ಸ್ಮರಿಸಿದ್ದಾರೆ.

ಇನ್ಸ್ಟಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದಿರುವ ಕಿಶೋರ್, ‘ಹಿಂದುತ್ವ (Hindutva) ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ’ ಎಂದಿದ್ದಾರೆ. ಇದನ್ನೂ ಓದಿ: ಸಲಿಂಗ ವಿವಾಹ ವಿಚಾರದಲ್ಲಿ ಸುಪ್ರೀಂ ಮಧ್ಯಪ್ರವೇಶ ಮಾಡಬಾರದು – ಕೇಂದ್ರದ ಪರ ವಾದ

ಮುಂದುವರೆದು, ‘ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ.ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು’ ಎಂದು ಬರೆದಿದ್ದಾರೆ ಕಿಶೋರ್.

Share This Article