ವಿಷ್ಣುವರ್ಧನ್ 16ನೇ ವರ್ಷದ ಪುಣ್ಯಸ್ಮರಣೆ – ಅಭಿಮಾನಿಗಳಿಂದ ಸಮಾಜಮುಖಿ ಕಾರ್ಯ

1 Min Read

ಸಾಹಸಸಿಂಹ ಡಾ.ವಿಷ್ಣುವರ್ಧನ್ (Vishnuvardhan) ಅವರು ಅಗಲಿ ಇಂದಿಗೆ 16 ವರ್ಷಗಳು. ಅಭಿನಯ ಭಾರ್ಗವನ 16ನೇ ವರ್ಷದ ಪುಣ್ಯಸ್ಮರಣೆಯನ್ನ ಅಭಿಮಾನಿಗಳು ಸರಳವಾಗಿ ಆಚರಣೆ ಮಾಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ದಿನ ವಿಷ್ಣುವರ್ಧನ್ ಅವರ ಸ್ಮಾರಕ ನೆಲಸಮ ಮಾಡಿದ ಬಳಿಕ ಅವರ ಹುಟ್ಟುಹಬ್ಬವನ್ನ ಹಾಗೂ ಈ ಬಾರಿ ಅವರ ಪುಣ್ಯಸ್ಮರಣೆಯನ್ನು ಖಾಸಗಿ ಜಾಗದಲ್ಲಿ ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ ವಿಷ್ಣುವರ್ಧನ್ ಅವರ ಅಭಿಮಾನಿಗಳು ಪುಣ್ಯಸ್ಮರಣೆ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಪುಣ್ಯಸ್ಮರಣೆಯ ಪ್ರಯುಕ್ತ ಅನ್ನದಾನ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಅಭಿಮಾನಿಗಳು ರಕ್ತದಾನ (Blood) ಮಾಡಿದ್ದಾರೆ. ಬಳಿಕ ತಮ್ಮ ನೆಚ್ಚಿನ ನಾಯಕನಿಗೆ ಗೇಣು ಜಾಗ ಸಿಕ್ಕಿಲ್ಲ ಅಂತಾ ಬೇಸರ ಹೊರ ಹಾಕಿದ್ದಾರೆ. ಜೊತೆಗೆ ಈ ವೇಳೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಅಭಿಮಾನಿಗಳು.  ಇದನ್ನೂ ಓದಿ: ಪ್ರಾಸಿಕ್ಯೂಷನ್ ವಿರುದ್ಧವೇ ರೇಣುಕಾಸ್ವಾಮಿ ತಾಯಿ ಹೇಳಿಕೆ

ವಿಷ್ಣುವರ್ಧನ್ ರಸ್ತೆಯಲ್ಲಿರುವ ಖಾಸಗಿ ಜಾಗದಲ್ಲಿ ಇಂದು ವಿಷ್ಣುವರ್ಧನ್ ಅವರ 16ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಗಿದೆ. ಮುಂದಿನ ವರ್ಷ ಅವರ ಹುಟ್ಟುಹಬ್ಬ ಬರುವ ವೇಳೆಗೆ ಪರ್ಯಾಯ ಜಾಗದಲ್ಲಿ ಅವರ ದರ್ಶನ ಕೇಂದ್ರ ನಿರ್ಮಾಣವಾಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

Share This Article