ಚಿತ್ರದುರ್ಗ: ಹೈಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ಗೆ (Sharan Pumpwell) ಹೈಕೋರ್ಟ್ 2 ಲಕ್ಷ ರೂ. ದಂಡ (Court Fine) ವಿಧಿಸಿದೆ.
ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್ (Karnataka Highcourt) ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಗೆಳೆಯನ ಬರ್ತ್‌ಡೇ ಸಂಭ್ರಮದಲ್ಲಿದ್ದ ಯುವಕ ಹೊಳೆಗೆ ಕಾಲುಜಾರಿ ಬಿದ್ದು ನೀರುಪಾಲು
ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್‌ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಇದನ್ನೂ ಓದಿ: `ಬಿಗ್ ಬಾಸ್’ಗೆ ರಿಲೀಫ್ ಕೊಡುತ್ತಾ ಸರ್ಕಾರ? – ಜಿಲ್ಲಾಡಳಿತಕ್ಕೆ ಜಾಲಿವುಡ್ ಕೊಟ್ಟ ಅರ್ಜಿಯಲ್ಲಿ ಏನಿದೆ..?
ಸೆ.13ರಂದು ಮಹಾಗಣಪತಿ ಶೋಭಾಯಾತ್ರೆ ವೇಳೆ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಅಂದು ಬೆಳಗ್ಗೆ 10:30 ರಿಂದ 12:30ರ ವರೆಗೆ ದರ್ಶನಕ್ಕೆ ಕೋರ್ಟ್ ಅವಕಾಶ ಕಲ್ಪಿಸಿತ್ತು. ಆದ್ರೆ ಪಂಪ್‌ವೆಲ್ 12:45ರ ವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಇದರಿಂದ ಆದೇಶ ಉಲ್ಲಂಘನೆ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಬಳಿಕ ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿತು. ಇದನ್ನೂ ಓದಿ: ಬಿಗ್ ಬಾಸ್ ತಂಡಕ್ಕೆ ಮತ್ತೆ ಶಾಕ್ – ಕೆಲವೇ ಹೊತ್ತಲ್ಲಿ ಈಗಲ್‌ಟನ್ ರೆಸಾರ್ಟ್‌ನಿಂದ 17 ಸ್ಪರ್ಧಿಗಳು ಶಿಫ್ಟ್ ಬೇರೆಡೆಗೆ ಶಿಫ್ಟ್