– ಶಿಕ್ಷಕರು, ದೈಹಿಕ ಶಿಕ್ಷಕರ ಮಧ್ಯೆ ತಾರತಮ್ಯ ಯಾಕೆ?
– ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ
ಬೆಂಗಳೂರು: ಸಮಾನ ವೇತನ, ಸಮಾನ ವಿದ್ಯಾರ್ಹತೆ ಹಾಗೂ ಒಂದೇ ನೇಮಕಾತಿ ವಿಧಾನವಿದ್ದರೂ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ (Physical Education Teachers) ಮಧ್ಯೆ ತಾರತಮ್ಯ ಧೋರಣೆ ಮಾಡಲಾಗುತ್ತಿದೆ ಎಂದು ರಾಜ್ಯ ಮಟ್ಟದ ದೈಹಿಕ ಶಿಕ್ಷಕರ ಸಂಘಟನೆ ಅಧ್ಯಕ್ಷ ಚೌಡಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ದೈಹಿಕ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಧರಣಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಜೊತೆಯಲ್ಲಿ ಒಂದು ದಿನದ ಸಾಂಕೇತಿಕ ಧರಣಿಯನ್ನು ಹಮ್ಮಿಕೊಂಡಿದ್ದೇವೆ. ಧೋರಣೆಯನ್ನು ಖಂಡಿಸಿ ಧರಣಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ದೈಹಿಕ ಶಿಕ್ಷಕರು ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ

ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಸರ್ಕಾರದ ಗಮನಕ್ಕೆ ತಂದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆ ಆಗದೆ ಇರಲಿ ಎನ್ನವ ಕಾರಣಕ್ಕೆ ಕಣ್ಣಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರಲಿಲ್ಲ ಅಂದರೆ ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ರಂಜನಿ ರಾಘವನ್
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಶಾಸಕರು ಮತ್ತು ಹಲವು ಸಚಿವರು ಪ್ರತಿ ಬಾರಿ ಅಧಿವೇಶನಗಳಲ್ಲಿ ಚರ್ಚೆ ಮಾಡಿದ್ದಾರೆ. ಆದೇಶಗಳನ್ನು ನೀಡಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿಸಿದ್ದಾರೆ ಆದರೆ ಇದುವರೆಗೂ ಇಲಾಖೆಯಲ್ಲಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಿಲ್ಲ. ಶೀಘ್ರವಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸುತ್ತೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ. ಚಂದ್ರಶೇಖರ್, ಖಜಾಂಚಿ ಡಿ.ವಿ ಬಾಲರಾಜ್, ಕಾರ್ಯಾಧ್ಯಕ್ಷ ಪಿ.ಡಿ ಕಾಗೋಡ್ ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.
