ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ

Public TV
2 Min Read

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರದಂದು ನಾಡಿಯಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೊಳಗಾದ ವರದಿಗಳ ಬಗ್ಗೆ ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯಾಗಿದ್ದಾಳೋ? ಎಂದು ಬಿಜೆಪಿ ಮತ್ತು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

ಅತ್ಯಾಚಾರದಿಂದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರುವ ಈ ಕಥೆಯನ್ನು ನೀವು ಅತ್ಯಾಚಾರ ಎಂದು ಕರೆಯುತ್ತೀರಾ? ಅವಳು ಗರ್ಭಿಣಿಯಾಗಿದ್ದಳೋ ಅಥವಾ ಪ್ರೇಮ ಸಂಬಂಧ ಹೊಂದಿದ್ದಾಳೋ? ಅವರು ವಿಚಾರಿಸಿದ್ದಾರೆಯೇ? ಈ ಕುರಿತು ನಾನು ಸ್ವತಃ ಪೊಲೀಸರನ್ನು ಕೇಳಿದೆ. ಅವರು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆ ಬಾಲಕಿಗೆ ಹುಡುಗನ ಜೊತೆ ಅನೈತಿಕ ಸಂಬಂಧ ಇದೆ ಅಂತಾನೂ ತಿಳಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್- ಟಿಎಂಸಿ ಮುಖಂಡನ ಮಗ ಬಂಧನ

STOP RAPE

ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಬಾಲಕಿಯು ಇದೇ ಮಂಗಳವಾರ ನಿಧನರಾಗಿದ್ದಾಳೆ. ಸಂತ್ರಸ್ತೆಯ ಕುಟುಂಬವು ಸ್ಥಳೀಯ ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕನ ಒತ್ತಡದ ಮೇರೆಗೆ ಶವಪರೀಕ್ಷೆ ಇಲ್ಲದೆ ಶವವನ್ನು ಸುಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಮಗ ಬ್ರಜ್ ಗೋಪಾಲ್ ಗೋಲಾ (21) ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಘಟನೆ ನಡೆದ ಐದು ದಿನಗಳ ನಂತರ ಪೊಲೀಸ್ ದೂರು ದಾಖಲಾಗಿದೆ.

ಎಪ್ರಿಲ್ 5 ರಂದು ಆಕೆ ಸಾವನ್ನಪ್ಪಿದ್ದು, ಅವಳ ಕುಟುಂಬ ಘಟನೆ ನಡೆದ ದಿನ ಪೊಲೀಸರ ಹತ್ತಿರ ಯಾಕೆ ಹೋಗಲಿಲ್ಲ? ಈಗಾಗಲೇ ಅವಳ ಶವವನ್ನು ಅವರು ಸುಟ್ಟುಹಾಕಿದ್ದಾರೆ. ಹಾಗಾದರೆ ಪೊಲೀಸರಿಗೆ ಎಲ್ಲಿ ಸಾಕ್ಷಿ ಸಿಗುತ್ತದೆ ಎಂದು ಮಮತಾ ಪ್ರಶ್ನಿಸಿದರು. ಇದನ್ನೂ ಓದಿ: ಶೀಘ್ರವೇ ಸ್ವಯಂ ಚಾಲಿತ ಕಾರುಗಳನ್ನು ಬಿಡುಗಡೆ ಮಾಡಲಿದ್ದಾರೆ ಮಸ್ಕ್

ಇದು ಒಂದು ಪ್ರೇಮ ಸಂಬಂಧವಾಗಿತ್ತು. ಕುಟುಂಬಕ್ಕೆ ತಿಳಿದಿದ್ದರಿಂದ ಅದು ದೃಢೀಕರಿಸಲ್ಪಟ್ಟಿದೆ. ದಂಪತಿ ಸಂಬಂಧದಲ್ಲಿದ್ದರೆ ನಾನು ಅದನ್ನು ನಿಲ್ಲಿಸಬಹುದೇ? ಇದು ಯುಪಿ ಅಲ್ಲ. ನಾವು ಇಲ್ಲಿ ಲವ್ ಜಿಹಾದ್ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸ್ವಾತಂತ್ರ್ಯ. ಆದರೆ ಯಾವುದೇ ಅವ್ಯವಹಾರ ನಡೆದರೆ ಪೆÇಲೀಸರು ಆರೋಪಿಗಳನ್ನು ಬಂಧಿಸುತ್ತಾರೆ. ಒಬ್ಬ ಶಂಕಿತನನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಮಾಧ್ಯಮಗಳನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡ ಅವರು ಬೆಳಗ್ಗೆ ಬಿಜೆಪಿ ಮುಖ್ಯಾಂಶ ಏನೆಂದು ನಿರ್ಧರಿಸುತ್ತದೆ. ಸುದ್ದಿ ವಾಹಿನಿಗಳು ಅದನ್ನು ಅನುಸರಿಸುತ್ತವೆ. ಇಂಧನ ಬೆಲೆ ಏರಿಕೆ ಕುರಿತು ಅವರು ಎಷ್ಟು ಬಾರಿ ಚರ್ಚಿಸಿದ್ದಾರೆ ಹೇಳಿ? ದೆಹಲಿ ಗಲಭೆ, ಎನ್‍ಆರ್‌ಸಿ ಕುರಿತು ಅವರು ಎಷ್ಟು ಬಾರಿ ಚರ್ಚಿಸಿದ್ದಾರೆ ಹೇಳಿ ಎಂದು ಪ್ರಶ್ನೆಗಳ ಸುರಿಮಳೆಗೈದರು.

ಈ ನಡುವೆ ಮೃತರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಸೋಮವಾರ ರಾಣಾಘಾಟ್‍ನಲ್ಲಿ ಬಿಜೆಪಿ 12 ಗಂಟೆಗಳ ಬಂದ್‍ಗೆ ಕರೆ ನೀಡಿದ್ದು, ಮೌನ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ನಾಯಕಿ ಅರ್ಚನಾ ಮಜುಂದಾರ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *