ಮುಂಬೈ: ಸತಾರಾದ (Satara) ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು (Police inspector) ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು ಆಕೆಯ ಅಂಗೈನಲ್ಲಿದ್ದ 7 ಸಾಲಿನ ಡೆತ್‌ನೋಟ್‌ನಿಂದ ಗೊತ್ತಾಗಿದೆ.
ಹೌದು. ವೈದ್ಯರು ಮತ್ತು ಜಿಲ್ಲಾ ಪೊಲೀಸರ ನಡುವೆ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮಧ್ಯೆ ಘಟನೆ ಸಂಭವಿಸಿದೆ. ಫಾಲ್ಟನ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆ ಕೈಮೇಲೆ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ. ಎಸ್‌ಐ ಗೋಪಾಲ್ ಬದ್ನೆ ತನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಪೊಲೀಸರ ನಿರಂತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವೈದ್ಯೆ (Woman Doctor) ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ನಡುವಿನ ವಿವಾದದಲ್ಲಿ ಸಿಲುಕಿದ್ದರು. ಇದರಿಂದ ವೈದ್ಯೆ ವಿರುದ್ಧ ಇಲಾಖಾ ಹಂತದ ವಿಚಾರಣೆ ಕೂಡ ಆರಂಭಿಸಲಾಗಿತ್ತು. ಈ ಮಧ್ಯೆ ಸಂತ್ರಸ್ತೆ ತಮ್ಮ ಹಿರಿಯ ಅಧಿಕಾರಿಯನ್ನ ಸಂಪರ್ಕಿಸಿ, ತನ್ನ ಮೇಲೆ ಅನ್ಯಾಯವಾಗುತ್ತಿದೆ. ಈ ದೌರ್ಜನ್ಯ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದಾಗ್ಯೂ ಕಿರುಕುಳ ಮುಂದುವರಿದ ಹಿನ್ನೆಲೆ ಅಂಗೈನಲ್ಲಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಅಂಗೈಯಲ್ಲಿರುವ ಡೆತ್‌ನೋಟ್ ಅಲ್ಲದೇ, ಸಂತ್ರಸ್ತೆ ಕಳೆದ ಜೂನ್ 19 ರಂದೇ ಫಾಲ್ಟನ್ ಉಪ-ವಿಭಾಗೀಯ ಕಚೇರಿಯ ಡಿಎಸ್ಪಿಗೆ ಬರೆದ ಪತ್ರದಲ್ಲೂ ಇದೇ ರೀತಿಯ ಆರೋಪಗಳನ್ನ ಮಾಡಿದ್ದರಂತೆ. ಫಾಲ್ಟನ್ ಗ್ರಾಮೀಣ ಪೊಲೀಸ್ ಇಲಾಖೆಯ ಎಸ್‌ಐ ಗೋಪಾಲ್ ಬದ್ನೆ, ಉಪ-ವಿಭಾಗೀಯ ಪೊಲೀಸ್ ಇನ್ಸ್‌ಪೆಕ್ಟರ್ ಪಾಟೀಲ್ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಲಾಡ್‌ಪುತ್ರೆ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸ್ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್
ʻನನ್ನ ಸಾವಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಸೇರಿ ಮೂವರು ಕಾರಣ. ಗೋಪಾಲ್ ಬದ್ನೆ ನನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾರೆ. 5 ತಿಂಗಳಿಗೂ ಹೆಚ್ಚು ಕಾಲ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆʼ ಅಂತ ಆರೋಪಿಸಿದ್ದಾರೆ.
ಘಟನೆ ಬಳಿಕ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರ ಆದೇಶದ ಮೇರೆಗೆ ಆರೋಪಿ ಪೊಲೀಸ್ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಅತ್ತ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಕೂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರ ತನಿಖೆಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್ ಗುದ್ದಿದ್ದಾಗ ಏನಾಯ್ತು?
ಸದ್ಯ ವೈದ್ಯೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
